ನಿರ್ಗತಿಕ ಮಾನಸಿಕ ಅಸ್ವಸ್ಥರಿಗೆ ಪುನರ್ವಸತಿ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಅಹ್ವಾನ

ಕೊಪ್ಪಳ ಜು.: ಕೇಂದ್ರ ಸರ್ಕಾರದ  ಡಿ.ಡಿ.ಆರ್.ಎಸ್. ಯೋಜನೆಯಡಿ ನಿರ್ಗತಿಕ ಮಾನಸಿಕ ಅಸ್ವಸ್ಥರಿಗೆ ಪುನರ್ವಸತಿ ಕೇಂದ್ರಗಳಿಗೆ ದಾಖಲಿಸಲು ಮಾನಸ ಕೇಂದ್ರಗಳನ್ನು ಪ್ರಾರಂಭಿಸಲು ಜಿಲ್ಲಾ ವ್ಯಾಪ್ತಿಯ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಛಿಸುವ ಆಸಕ್ತರು ಜು. 31 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ವೆಬ್‌ಸೈಟ್ ಜisಚಿbiಟiಣಥಿಚಿಜಿಜಿಚಿiಡಿs.gov.iಟಿ  ಮೂಲಕ ಸಲ್ಲಿಸಿ ಅಥವಾ ಆಫ್‌ಲೈನ್ ಮೂಲಕವು  ಸಹ ಪ್ರಸ್ತಾವನೆಯನ್ನು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಇವರಿಗೆ ಸಲ್ಲಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು  ತಿಳಿಸಿದ್ದಾರೆ.

Please follow and like us:
error