ನಿರ್ಭಯಾ ಹತ್ಯೆ ಪ್ರಕರಣ: ಇಬ್ಬರು ಅಪರಾಧಿಗಳ ಪರಿಹಾರಾತ್ಮಕ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಹೊಸದಿಲ್ಲಿ, ಜ.14: ನಿರ್ಭಯಾ ಗ್ಯಾಂಗ್‌ರೇಪ್ ಪ್ರಕರಣದ ಅಪರಾಧಿಗಳಿಬ್ಬರು ಸಲ್ಲಿಸಿರುವ ಪರಿಹಾರಾತ್ಮಕ  ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಅಪರಾಧಿಗಳಾದ ವಿನಯ ಕುಮಾರ್ ಹಾಗೂ ಮುಕೇಶ್ ತಮಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಆರೋಪಿಗಳನ್ನು ಜನವರಿ 22ರ ಬೆಳಗ್ಗೆ ಗಲ್ಲು ಶಿಕ್ಷೆ ವಿಧಿಸುವಂತೆ ದಿಲ್ಲಿಯ ನ್ಯಾಯಾಲಯ ಆದೇಶಿಸಿತ್ತು.

Please follow and like us:
error