ನಿವೃತ್ತ ಲೋಕಾಯುಕ್ತ ನ್ಯಾ. ಎನ್.ವೆಂಕಟಾಚಲ ನಿಧನ

ಬೆಂಗಳೂರು, ಅ.30: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ಬುಧವಾರ ಬೆಳಗ್ಗೆ ಆರು ಗಂಟೆಗೆ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದ ಮೊದಲ ಲೋಕಾಯುಕ್ತರಾಗಿದ್ದ ಎನ್.ವೆಂಕಟಾಚಲ ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದರು. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿಯೂ ಸೇವೆ ಸಲ್ಲಿಸಿದ್ದರು.

Please follow and like us:

Related posts