ನೆಲ,ಜಲ,ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು-ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ‌ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ  ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ,ಜಲ,ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

Please follow and like us:
error