ನ್ಯಾಯಾಂಗ ನಿಂದನೆ ಪ್ರಕರಣ : ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ಹಾಲಿ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ ಕಾರ್ಯವೈಖರಿ ಬಗ್ಗೆ ಟೀಕಿಸಿದ್ದಕ್ಕಾಗಿನ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ “ಸೆಪ್ಟಂಬರ್ 15 ರೊಳಗೆ 1 ರೂ ದಂಡ ಕಟ್ಟಬೇಕು, ತಪ್ಪಿದ್ದಲ್ಲಿ ಮೂರು ತಿಂಗಳ ಜೈಲುವಾಸ ಮತ್ತು ಮೂರು ತಿಂಗಳ ವಕೀಲ ವೃತ್ತಿಗೆ ನಿ‍ಷೇಧ” ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪಿತ್ತಿದೆ.

ಆಗಸ್ಟ್ 5 ರಂದು ಭೂಷಣ್ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಆಗಸ್ಟ್ 14 ರಂದು ಅವರು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿ, ಆಗಸ್ಟ್ 20 ರಂದು ಶಿಕ್ಷೆ ಪ್ರಮಾಣ ಘೊಷಿಸುವುದಾಗಿ ಹೇಳಿತ್ತು. ಆದರೆ ಆಗಸ್ಟ್ 20 ರಂದು ನಡೆದ ವಿಚಾರಣೆಯಲ್ಲಿ ಸುಪ್ರೀಂ ನಿರ್ದೇಶನದಂತೆ ಬೇಷರತ್ ಕ್ಷಮೆಯಾಚಿಸಲು ಭೂಷಣ್ ನಿರಾಕರಿಸಿದರು. ನೀವೆಷ್ಟೇ ಸಮಯ ಕೊಟ್ಟರೂ ತನ್ನ ಪ್ರಯೋಜನವಿಲ್ಲ ಎಂದಿದ್ದರು.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದರು.

 

Supreme Court imposes a fine of Re 1 fine on Prashant Bhushan. In case of default, he will be barred from practising for 3 years & will be imprisoned of 3 months

Please follow and like us:
error