ಪಂಚಮಸಾಲಿ ಸಮಾಜ 2ಎ ಗೆ ಸೇರಲಿ –ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.10ಕ್ಕೆ ಉಪವಾಸ ಸತ್ಯಾಗ್ರಹ

ಕೊಪ್ಪಳ: ಸಮಾಜದ ಬೆಳವಣಿಗೆಗೆ ಬಗ್ಗೆ ಪೀಠಗಳು ಎಷ್ಟೇ ಆಗಲಿ, ಆದರೆ ಸಮಾಜ ಕಟ್ಟಲು ಒತ್ತು ನೀಡಬೇಕು. ನಮ್ಮ ಪಂಚಮಸಾಲಿ ಸಮುದಾಯಕ್ಕೆ 2ಎ ಪ್ರಮಾಣ ಪತ್ರ ಪಡೆಯಲು ಗೆಜೆಟ್‌ನಲ್ಲಿ ಮಾನ್ಯತೆ ದೊರಕಿಸಲು ಸಮಾಜದ ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ಮಾಜಿ ಶಾಸಕ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಕರೆ ನೀಡಿದರು.

ನಗರದ ಪ್ಯಾಟಿ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ನಡೆದ ಜಿಲ್ಲೆಯ ಏಳು ತಾಲೂಕುಗಳ ಲಿಂಗಾಯತ ಪಂಚಮಸಾಲಿ ಸಮಾಜದ
ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 10ರಂದು ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸುವ ವಿಷಯ ಪ್ರಸ್ತಾಪಿಸಿದರು.

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಜ್ಯ ಯುವ ಘಟಕದ ಅಧ್ಯಕ್ಷ ಸೋಮಶೇಖರ್ ಅಲ್ಯಾಳ ಮಾತನಾಡಿ, ಸಮಾಜದ ಬೆಳವಣಿಗೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು, ಸಮುದಾಯದ ಹಿರಿಯರು ಮತ್ತು ಕಿರಿಯರು ನಡುವೆ ಕೆಲಸ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಸಮಾರಂಭದ ಸಾನ್ನಿಧ್ಯ ವಹಿಸಿದ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಶ್ರೀ ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸರ್ಕಾರಿ ಸೌಲಭ್ಯಗಳ ಬಗ್ಗೆ ಸರ್ಕಾರದಲ್ಲಿ ಉದ್ಯೋಗಗಳ ಬಗ್ಗೆ ಚರ್ಚೆ ಮಾಡಲಾಯಿತು. ಸಮಾಜಕ್ಕೆ ಮೀಸಲಾತಿಯಲ್ಲಿ ನೀಡಲು ರಾಜ್ಯದ ಮುಖ್ಯಮಂತ್ರಿಗೆ ನಿರ್ಧಾರ ಮಾಡಲಾಯಿತು.

ನಂತರ ಮುಖಂಡರೊಡನೆ ಚರ್ಚಿಸಿ ಅ.10ರಂದು ಬೆಳಗಾವಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಣಯಿಸಲಾಯಿತು.
ಸಂಘಟನೆ ಮೂಲಕ ರಾಜ್ಯದ ಮುಖ್ಯಮಂತ್ರಿಯ ಹಾಗೂ ನಮ್ಮ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸುವ ಕುರಿತು ಚರ್ಚೆ ಮಾಡಲಾಯಿತು.

ನಂತರ ಜಿಲ್ಲಾ ಘಟಕದ ಹಾಗೂ ಏಳು ತಾಲೂಕುಗಳನ್ನು ಒಳಗೊಂಡಂತೆ ಯುವ ಘಟಕದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಮತ್ತು ಏಳು ತಾಲೂಕುಗಳ ಪಂಚಮಸಾಲಿ ಸಮಾಜದ ಹಿರಿಯರು ಮತ್ತು ಯುವಕರು ಪಾಲ್ಗೊಂಡಿದ್ದರು.

Please follow and like us:
error