ಪತ್ರಕರ್ತರಿಗೆ ಪ್ರತ್ಯೇಕ ಕೋವಿಡ್ ಬೆಡ್ ಮೀಸಲಿರಿಸಲು ಕೆಯುಡಬ್ಲ್ಯೂಜೆ ಮನವಿ

ಕನ್ನಡನೆಟ್  ನ್ಯೂಸ್ : ಪತ್ರಕರ್ತರಿಗಾಗಿ ಕೋವಿಡ್ ಬೆಡ್‌ಗಳನ್ನು ಮೀಸಲಿಡಲು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ ಸಲ್ಲಿಸಲಾಯಿತು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಕೋವಿಡ್ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವ ಪತ್ರಕರ್ತರು ಮತ್ತು ಮಾಧ್ಯಮ ಸಿಬ್ಬಂದಿಗಳು ತೀವ್ರ ಸಂಕಷ್ಟ ಎದುರಿಸುತ್ತಾರೆ . ಕೋವಿಡ್ ಸೋಂಕಿತರಾದವರ ಪರಿಸ್ಥಿತಿಯಂತೂ ಶೋಚನೀಯವಾಗಿದೆ . ಪ್ರಧಾನ ಮಂತ್ರಿಗಳು ಪತ್ರಕರ್ತರನ್ನು ಕೋವಿಡ್ ವಾರಿಯರ್ ಎಂದು ಕರೆದಿದ್ದು  ಆ ನಿಟ್ಟಿನಲ್ಲಿ ಈ ತನಕ ಕೇಂದ್ರ ಸರ್ಕಾರದಿಂದ ಸೌಲಭ್ಯಗಳು ದೊರೆತಿಲ್ಲ . ಕೋವಿಡ್ 2 ನೇ ಅಲೆಯಲ್ಲಿ ಹಲವು ಪತ್ರಕರ್ತರು ಸೋಂಕಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದರೂ ಕೆಲವರು ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿ . ಆದ್ದರಿಂದ ಮಾಧ್ಯಮ ಕ್ಷೇತ್ರದ ಬಗ್ಗೆ ಸರ್ಕಾರ ಗಂಭೀರವಾಗಿ ಗಮನಹರಿಸಬೇಕು . ಪತ್ರಕರ್ತರನ್ನು ಕೋವಿಡ್ ವಾರಿಯರ್ ಎಂದು ಪರಿಗಣಿಸಿ ಕೋವಿಡ್ ಸೋಂಕಿತರಾದ ಪತ್ರಕರ್ತರಿಗಾಗಿಯೇ ತಾಲ್ಲೂಕು , ಜಿಲ್ಲೆ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಮುಖ ಕಾರ್ಪೋರೇಟ್ ಆಸ್ಪತ್ರೆಗಳಲ್ಲಿ ಪತ್ರಕರ್ತರಿಗಾಗಿಯೇ ಪ್ರತ್ಯೇಕ ಬೆಡ್‌ಗಳನ್ನು ಮೀಸಲಿಡಬೇಕೆಂದು ವಿನಂತಿಸಿಕೊಂಡಿದ್ದಾರೆ.

Please follow and like us:
error