ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ-ಸಿಎಂ. ಬಿಎಸ್ವೈ

ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಿ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

 

ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು . ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ ಎಂದು ಹೇಳಿದ್ಧಾರೆ

 

Please follow and like us:
error