ಪೆಟ್ರೋಲ್, ಡೀಸೆಲ್‌ಗಳ ಬೆಲೆ ಏರಿಕೆ‌ ವಿರುದ್ಧ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ-ಸಿದ್ದರಾಮಯ್ಯ

Kannadanet NEWS

ಬೆಂಗಳೂರು : ಪೆಟ್ರೋಲ್, ಡೀಸೆಲ್‌ಗಳ ಬೆಲೆ ಏರಿಕೆ‌ ವಿರುದ್ಧ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲಿದ್ದೇವೆ. ಕಳೆದ 6 ವರ್ಷಗಳಲ್ಲಿ ಡೀಸೆಲ್, ಪೆಟ್ರೋಲ್ ದರ ಏರಿಕೆ ಮತ್ತು ತೆರಿಗೆ ಹೆಚ್ಚಳದ ಮೂಲಕ ಕೇಂದ್ರ ಸರ್ಕಾರ ಸುಮಾರು ರೂ.18 ಲಕ್ಷ ಕೋಟಿ ಸಂಗ್ರಹ ಮಾಡಿದ್ದರೂ ಇನ್ನೂ ಜನರ ಸುಲಿಗೆ ನಿಲ್ಲಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ಧಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು

ಲಾಕ್‌ಡೌನ್ ತೆಗೆದ ಬಳಿಕ ಕೊರೊನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ, ಸೋಂಕಿನ ವಿರುದ್ಧ ಹೋರಾಡುತ್ತಿರುವ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಸೂಕ್ತ ಸೌಲಭ್ಯ-ರಕ್ಷಣೆ ಇಲ್ಲ. ರೈತರು ಮತ್ತಿತರ ಸಮುದಾಯಗಳಿಗೆ ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಕೂಡ ಈವರೆಗೆ ತಲುಪಿಲ್ಲ.

ಕೊರೊನಾ ವಿಚಾರದಲ್ಲಿ ದೇಶದ ಪರಿಸ್ಥಿತಿ ಭಯಾನಕವಾಗಿದೆ. ಮುಂದೆ ನಾವು ಅಮೆರಿಕ ಮೀರಿಸುವ ಸ್ಥಿತಿ ಎದುರಾದರೂ ಆಶ್ಚರ್ಯವಿಲ್ಲ. ಸಮಸ್ಯೆ ಇಷ್ಟು ಗಂಭೀರವಾಗಿದ್ದರೂ ಕೇಂದ್ರ ಸರ್ಕಾರ ಜಿಡಿಪಿಯಲ್ಲಿ ಶೇ.1ರಷ್ಟನ್ನೂ‌ ಸೋಂಕು ನಿಯಂತ್ರಣಕ್ಕೆ ಖರ್ಚು ಮಾಡಿಲ್ಲ.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಹಾಗೂ ಭೂ ಸುಧಾರಣೆ ಕಾಯಿದೆ ತಿದ್ದುಪಡಿಯಿಂದ ನಾಡಿನ ರೈತರು ಬೀದಿಪಾಲಾಗಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಈ ಅನ್ಯಾಯದ ವಿರುದ್ಧ ಪಕ್ಷದ ವತಿಯಿಂದ ಜೈಲ್ ಭರೋ ಸೇರಿದಂತೆ ನಾನಾ ರೀತಿಯ ಹೋರಾಟಗಳನ್ನು ಕೈಗೆತ್ತಿಕೊಳ್ಳುತ್ತೇವೆ ಎಂದಿದ್ದಾರೆ

Please follow and like us:
error