ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ : ಕೇಂದ್ರ ಸರ್ಕಾರ ಮಧ್ಯಮ ವರ್ಗದ ಜನರನ್ನು ಬಲಿ ಹಾಕುತ್ತಿದೆ-ಸಿದ್ದರಾಮಯ್ಯ

ಕಚ್ಛಾ ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕುಸಿದಿದ್ದರೂ ಪೆಟ್ರೋಲ್, ಡೀಸೆಲ್‌ ಬೆಲೆ ನಿತ್ಯ ಏರಿಕೆಯಾಗುತ್ತಿದೆ. ಸದ್ಯ ಪೆಟ್ರೋಲ್, ಡೀಸೆಲ್‌ ಲೀಟರ್ ಗೆ ರೂ. 25 – 30 ಇರಬೇಕಿತ್ತು. ಕೇಂದ್ರ ಸರ್ಕಾರ ಪದೇ ಪದೆ ದರ ಏರಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಜನರನ್ನು ಬಲಿ ಹಾಕುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್.

ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಒಂದು ಕರಾಳ ಶಾಸನವಾಗಲಿದೆ. ಇದರ ವಿರುದ್ಧ ಕಾಂಗ್ರೆಸ್ ಪಕ್ಷ ರಾಜ್ಯವ್ಯಾಪಿ ಹೋರಾಟ ನಡೆಸಲಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಜೈಲ್ ಭರೋ ಚಳವಳಿ ಸಹ ನಡೆಸಲಾಗುವುದು.

 

ವಿಧಾನ ಪರಿಷತ್ ಚುನಾವಣೆಗೆ ಆಭ್ಯರ್ಥಿಗಳಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಮತ್ತು ನಸೀರ್ ಅಹಮದ್ ಅವರಿಗೆ ಆಭಿನಂದನೆಗಳು. ಅವರನ್ನು ಆಯ್ಕೆ ಮಾಡಿರುವ ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೃತಜ್ಞತೆಗಳು ಎಂದು ಟ್ವೀಟ್ ಮಾಡಿದ್ದಾರೆ.

Please follow and like us:
error