ಪ್ರಚೋದನಾತ್ಮಕ ಹೇಳಿಕೆ ಸೋಮಶೇಖರ ರೆಡ್ಡಿ  ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲು ಸಿದ್ದರಾಮಯ್ಯ ಮನವಿ

ಬೆಂಗಳೂರು : ಪ್ರಚೋದನಾತ್ಮಕ ಹೇಳಿಕೆ ನೀಡಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಿರುವ ಶಾಸಕ ಸೋಮಶೇಖರ ರೆಡ್ಡಿಯವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವಂತೆ ಕಾಂಗ್ರೆಸ್ ಮುಖಂಡರ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.  ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್, ಶಾಸಕ ಜಮೀರ್ ಅಹ್ಮದ್, ಈಶ್ವರ ಖಂಡ್ರೆ , ಶಾಸಕ ರಾಘ‍ವೇಂದ್ರ ಹಿಟ್ನಾಳ, ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಇಂದು ದೂರು ಸಲ್ಲಿಸಲಾಗಿದೆ.

ಪೊಲೀಸ್ ಮಹಾ ನಿರ್ದೇಶಕರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರು ಮನವಿ ಸ್ವೀಕರಿಸಿದರು.

Please follow and like us:
error