ಪ್ರಧಾನಿಯನ್ನು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ.29: ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. 

ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಎಚ್ ಎಎಲ್ ಗೆ ಆಗಮಿಸಿದ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲ, ಕೇಂದ್ರ ಸಚಿವ ಅನಂತಕುಮಾರ್, ಬೃಹತ್ ಬೆಂಗಳೂರು ಮೇಯರ್ ಸಂಪತ್ ರಾಜ್ ಬರಮಾಡಿಕೊಂಡರು. ನಗರದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಪ್ರಧಾನಿ ಮೋದಿ ಇಂದು ಸಂಜೆ ಬೀದರ್ ಜಿಲ್ಲೆಗೆ ತೆರಳಲಿದ್ದಾರೆ.

Please follow and like us:
error