ಫೆಬ್ರವರಿ. 04 ರಿಂದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : ಎಂ.ಪಿ. ಮಾರುತಿ

ಕೊಪ್ಪಳ,  : ರಾಜ್ಯ ಸರ್ಕಾರಿ ನೌಕರರ ಕೊಪ್ಪಳ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟವನ್ನು ಫೆಬ್ರವರಿ. 04, 05 ಮತ್ತು 06 ರಂದು ಮೂರು ದಿನಗಳ ಕಾಲ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅವರು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಆಯೋಜನೆ ಸಂಬAಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವುದಕ್ಕೆ ಸಂಬAಧಿಸಿದAತೆ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ಆಯಾ ಅಧಿಕಾರಿಗಳು ತಮಗೆ ವಹಿಸಿದ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು. ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಕುಸ್ತಿ, ಪವರ್‌ಲಿಫ್ಟಿಂಗ್ ಸೇರಿದಂತೆ ಒಳಾಂಗಣ ಕ್ರೀಡೆಗಳಾದ ಕೇರಂ, ಚೆಸ್ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಈ ಬಾರಿ ಕೋವಿಡ್-19 ಹಿನ್ನೆಲೆಯಲ್ಲಿ ಈಜು ಸ್ಪರ್ಧೆಯನ್ನು ರದ್ದುಗೊಳಿಸಲಾಗಿದೆ ಎಂದರು.
ಕ್ರೀಡಾಕೂಟದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಿಂದ ಸರ್ಕಾರಿ ನೌಕರರು ಆಗಮಿಸಿ, ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತಾಗಬೇಕು. ನೌಕರರಿಗೆ ಓಓಡಿ ಸೌಲಭ್ಯ ಒದಗಿಸುವುದು, ಊಟೋಪಹಾರದ ವ್ಯವಸ್ಥೆ, ಕ್ರೀಡಾ ಸಾಮಗ್ರಿಗಳ ಪೂರೈಕೆ, ನಿರ್ಣಾಯಕರ ನಿಯೋಜನೆ, ಕ್ರೀಡಾಂಗಣದಲ್ಲಿ ಪ್ರಥಮ ಚಿಕಿತ್ಸೆ, ಔಷಧೋಪಚಾರ ವ್ಯವಸ್ಥೆ, ಅಂಬುಲೆನ್ಸ್ ವ್ಯವಸ್ಥೆ ಕೈಗೊಳ್ಳಬೇಕು. ಅಲ್ಲದೇ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲಾಗುವುದು. ಕ್ರೀಡಾಕೂಟಕ್ಕೆ ಸಕಲ ನೆರವು ಒದಗಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರಿ ನೌಕರರ ಕೊಪ್ಪಳ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಫೆ. 04 ರಂದು ಅಂಗವಿಕಲ ಸರ್ಕಾರಿ ನೌಕರರಿಗೆ ಹಾಗೂ ದೈಹಿಕ ಶಿಕ್ಷಕರಿಗೆ ಸ್ಪರ್ಧೆಗಳನ್ನು ಆಯೋಜಿಸಬೇಕು. ಅಂಗವಿಕಲ ಸರ್ಕಾರಿ ನೌಕರರ ಕ್ರೀಡೆಗಳಿಗೆ ಸಂಬAಧಿಸಿದAತೆ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯಿಂದ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಫೆ. 05 ಮತ್ತು 06 ರಂದು ಉಳಿದ ಎಲ್ಲಾ ನೌಕರರ ಕ್ರೀಡಾ ಕೂಟ ನಡೆಯಲಿದೆ. ಕ್ರೀಡಾಂಗಣದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ನಗರಸಭೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ನಾಗರಾಜ ಜುಮ್ಮನ್ನವರ್ ಅವರು ಮಾತನಾಡಿ, ಜಿಲ್ಲಾ ಮಟ್ಟದ ಕ್ರೀಡಾಕೂಟವಾಗಿರುವುದರಿಂದ, ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಎಲ್ಲ ಅಧಿಕಾರಿ, ಸಿಬ್ಬಂದಿ ಹಾಗೂ ಎಲ್ಲ ಸರ್ಕಾರಿ ನೌಕರರ ಸಹಕಾರ ಅಗತ್ಯವಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶರಣಬಸವರಾಜ, ಡಿ.ವೈ.ಎಸ್.ಪಿ ವೆಂಕಟಪ್ಪ ನಾಯಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಅಮೃತ್ ಅಸ್ಟಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ ಶಿಂತ್ರೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರ ಸಂಘದ ತಾಲ್ಲೂಕ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error