ಬಳ್ಳಾರಿ ಕೋವಿಡ್ ಸೋಂಕಿತರ ಅಂತ್ಯಸಂಸ್ಕಾರದ ಸಿಬ್ಬಂದಿ ನಡವಳಿಕೆಗೆ ನೋವು ವ್ಯಕ್ತಪಡಿಸಿದ ಸಿಎಂ

ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಸಿಬ್ಬಂದಿ ನಡವಳಿಕೆ ಅತ್ಯಂತ ಅಮಾನವೀಯ ಹಾಗೂ ತೀವ್ರ ನೋವಿನ ಸಂಗತಿ. ಕೋವಿಡ್ ಸೋಂಕಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.  ಬಳ್ಳಾರಿ ಜಿಲ್ಲೆಯಲ್ಲಿ ನಿನ್ನೆ ಮೃತಪಟ್ಟವರ ಅಂತಿಮ ಸಂಸ್ಕಾರ ಮಾಡುವ ವಿಡಿಯೋಗಳು ವೈರಲ್ ಆಗಿದ್ದು ಜನತೆಗೆ ಶಾಕ್ ನೀಡಿವೆ ಈ ಹಿನ್ನೆಲೆಯಲ್ಲಿ ಸಿಎಂ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ

ಸೋಂಕಿತರ ಅಂತ್ಯ ಸಂಸ್ಕಾರವನ್ನು ಗೌರವದಿಂದ ನೆರವೇರಿಸಿ ಎಂದು ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗೆ ವಿನಂತಿಸುತ್ತೇನೆ. ಮಾನವೀಯತೆಯಿಂದ ನಡೆದುಕೊಳ್ಳೋಣ, ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ಹೇಳಿದ್ದಾರೆ

Please follow and like us:
error