ಬಹಿರಂಗ ಪ್ರಚಾರ ಅಂತ್ಯ, ಬಳಿಕ ಚುನಾವಣಾ ಕಾರ್ಯಕ್ರಮಗಳಿಗೆ ನಿರ್ಬಂಧ : ಪಿ.ಸುನೀಲ್ ಕುಮಾರ್

ಕೊಪ್ಪಳ ಏ. 20 : ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ನಿಮಿತ್ತ ಕೊಪ್ಪಳ ಲೋಕಸಭಾ ಕ್ಷೆÃತ್ರದಲ್ಲಿ ಏಪ್ರಿಲ್. 21 ರ ಸಂಜೆ 06 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಅವಧಿಯಲ್ಲಿ ಚುನಾವಣಾ ಬಹಿರಂಗ ಕಾರ್ಯಕ್ರಮಗಳನ್ನು ನಿರ್ಭಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್‌ರವರು ತಿಳಿಸಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಕೊಪ್ಪಳ ಲೋಕಸಭಾ ಕ್ಷೆÃತ್ರಕ್ಕೆ ಏಪ್ರಿಲ್. 23 ರಂದು ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳ, ಅಭ್ಯರ್ಥಿಗಳ ಬಹಿರಂಗ ಪ್ರಚಾರ/ ಮೆರವಣಿಗೆಗಳು ಏಪ್ರಿಲ್. 21ರ ಸಂಜೆ 6 ಗಂಟೆಗೆ ಅಂತ್ಯಗೊಳ್ಳುತ್ತವೆ. ಹೀಗಾಗಿ ಮತದಾನ ಮುಕ್ತಾಯಗೊಳ್ಳುವ 48 ಗಂಟೆಯೊಳಗಿನ ಅವಧಿಯಲ್ಲಿ ಚುನಾವಣಾ ಸಂಬಂಧಿಸಿದಂತೆ ಛಾಯಾಚಿತ್ರಣ, ದೂರದರ್ಶನ ಮತ್ತು ಇನ್ನಿತರ ಎಲೆಕ್ಟಾçನಿಕ್ ಮಾಧ್ಯಮಗಳ ಮೂಲಕ ಮತ್ತು ಸಂಗೀತ ಕಾರ್ಯಕ್ರಮಗಳು/ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಮುಖಾಂತರ ಜನರನ್ನು ಸೆಳೆದು ಪ್ರಚಾರ ಮಾಡುವುದನ್ನು ಸಹ ನಿರ್ಭಧಿಸಲಾಗಿದೆ.
ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಜರುಗಿಸುವ ಸಂಬಂಧವಾಗಿ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ತಮ್ಮ ಪ್ರಚಾರಕ್ಕಾಗಿ ಹೊರಗಿನ ಮತ ಕ್ಷೇತ್ರದಿಂದ ಕರೆತಂದ ಮತ್ತು ಈ ಕ್ಷೆÃತ್ರದ ಮತರಾರರಲ್ಲದೇ ಇರುವ ರಾಜಕೀಯ ಅಧಿಕಾರಸ್ಥರು, ತಾರಾ ಪ್ರಚಾರಕರು, ಪಕ್ಷದ ಕಾರ್ಯಕರ್ತರು ಮೆರವಣಿಗೆ ಸಂಬಂಧ ಕರೆತಂದ ಕಾರ್ಯಕರ್ತರು, ಪ್ರಚಾರ ಕಾರ್ಯಕರ್ತರು ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಕೊಪ್ಪಳ ಲೋಕಸಭಾ ಕ್ಷೆÃತ್ರದಿಂದ ಹೊರಹೋಗಲು ಸೂಚನೆ ನೀಡಲಾಗಿದೆ.
ಮತದಾನ ಅವಧಿಯಲ್ಲಿ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಮನೆ ಬಾಗಿಲಿಗೆ ಹೋಗಿ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಹೋಗುವುದನ್ನು ನಿರ್ಭಂಧಿಸಿರುವುದಿಲ್ಲ. ಆದರೆ 05 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗುಂಪು ಕೂಡಿಕೊಂಡು ಮನೆಯಿಂದ ಮನೆಗೆ ಹೋಗಿ ಮತಯಾಚಿಸುವುದನ್ನು ನಿರ್ಭಂಧಿಸಲಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಜರುಗಿಸಲು ಸಹಕರಿಸಬೇಕು ಎಂದು ತಿಳಿಸಲಾಗಿದೆ.

Please follow and like us:
error