ಬಾದಾಮಿಯಲ್ಲಿ ಕೊರೋನ ಪಾಸಿಟಿವ್ : ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಿದ್ದರಾಮಯ್ಯ ಸೂಚನೆ

ಬಾಗಲಕೋಟೆ : ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಕೊರೋನ ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಾಲೂಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

13 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಚ್ಚರ ವಹಿಸುವಂತೆ ಹಾಗೂ‌ ಸೋಂಕು ಹರಡದಂತೆ ನೋಡಿಕೊಳ್ಳಲು ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲಾಧಿಕಾರಿಗಳು, ಬಾದಾಮಿ ತಹಶೀಲ್ದಾರ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. ಮಾಸ್ಕ್, ಸ್ಯಾನಿಟೈಸರ್ ಜೊತೆಗೆ ಸುರಕ್ಷತ ಅಂತರ ಕಾಯ್ದುಕೊಳ್ಳುವಂತೆ ಅವರು ಕ್ಷೇತ್ರದ ಜನರಲ್ಲಿಯೂ ಮನವಿ ಮಾಡಿದ್ದಾರೆ.

Please follow and like us:
error