ಬಿಜೆಪಿ ಶಾಸಕರು ತಮ್ಮ ವೈವಾಹಿಕ ವಿವರ ಸಾರ್ವಜನಿಕರಿಗೆ ತಿಳಿಸಬೇಕು- ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಯಾವ ಶಾಸಕರೂ ಏಕಪತ್ನಿವೃತಸ್ಥರಲ್ಲ ಎಂಬ ಸಚಿವ ಡಾ.ಸುಧಾಕರ್ ಹೇಳಿಕೆ ಬಿಜೆಪಿ ಶಾಸಕರಿಗೂ ಅನ್ವಯವಾಗುವ ಕಾರಣ ಅವರೆಲ್ಲರೂ ತಕ್ಷಣ ಸ್ಪಷ್ಟೀಕರಣ ನೀಡಿ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ಏಕಪತ್ನಿವೃತಸ್ಥರಲ್ಲ ಎಂಬ ಹೇಳಿಕೆಯನ್ನು ಬಿಜೆಪಿ ಶಾಸಕರು ವಿರೋಧಿಸುವುದಾಗಿದ್ದರೆ ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಯೀಚ್ಚೆಯಿಂದ ತನಿಖೆಗೆ ಒಳಪಡಲು ನಿರ್ಧರಿಸಿದಂತೆ ಅವರೂ ಕೂಡಾ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತಮ್ಮ ಬಗ್ಗೆ ಕೂಡಾ ತನಿಖೆ ನಡೆಯಬೇಕೆಂದು ಮನವಿ ಮಾಡಬೇಕು. ಡಾ.ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ ರಾಜ್ಯ ಸರ್ಕಾರ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 494 ಮತ್ತು 495ರ ಅನ್ವಯ ಕಾನೂನು ಕ್ರಮಕೈಗೊಳ್ಳಬೇಕು. 1955ರ ಹಿಂದೂ ವಿವಾಹ ಕಾಯ್ದೆಯಡಿ ಬಹುಪತ್ನಿತ್ವ ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ಹೇಳಿದ್ಧಾರೆ.

 

Please follow and like us:
error