ಬಿ.ಎಸ್.ಯಡಿಯೂರಪ್ಪ ಮುಂದಿನ ದಿನಗಳಲ್ಲಿಯೂ ಕೂಡ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ: ಬಿ.ಸಿ.ಪಾಟೀಲ

 

ಕೊಪ್ಪಳ: ಜುಲೈ 28ಕ್ಕೆ ನಮ್ಮನ್ನು ಅನರ್ಹರನ್ನಾಗಿ ಮಾಡಿದ್ದ ಕಾಂಗ್ರೆಸ್ ಸಂತೋಷಕ್ಕೆ ಒಂದು ವರ್ಷ. ಕೆಲವೇ ದಿನಗಳಲ್ಲಿ ಜನರು ಕಾಂಗ್ರೆಸ್ಗೆ ಮುಖಭಂಗ ಆಗುವಂತೆ ಅರ್ಹರನ್ನಾಗಿ ಮಾಡಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ನವರೇ ಅನರ್ಹರಾಗ್ತಾರೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಕೊಪ್ಪಳದಲ್ಲಿ ಸೋಮವಾರ ಬಿಜೆಪಿ ಜಿಲ್ಲಾ ಕಚೇರಿ ಉದ್ಘಾಟಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರಕ್ಕೆ ವರ್ಷ ತುಂಬಿದ್ದು, ಸಾಧನೆ ಮಾಡಿದ ತೃಪ್ತಿ ಇದೆ. ಇದನ್ನು ಸಹಿಸಿಕೊಳ್ಳದ ಕಾಂಗ್ರೆಸ್ನವರು ಏನೇನೋ ಮಾತಾಡ್ತಾರೆ ಎಂದು ಪ್ರತಿಕ್ರಿಯೆ ನೀಡಿದರು.

ಬಿ.ಎಸ್.ಯಡಿಯೂರಪ್ಪ ಅವರೇ ಮುಂದಿನ ದಿನಗಳಲ್ಲಿಯೂ ಕೂಡ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು,ಅವರ ನಾಯಕತ್ವದಲ್ಲಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸುಭದ್ರವಾಗಿದೆ.  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ್ದು, ಮುಂದಿನ ಮೂರು ವರ್ಷವೂ ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡುತ್ತೇವೆ ಎಂದು ಅವರು ಭರವಸೆ ನೀಡಿದರು. ಎಲ್ಲೂ ಸಹ ರಸಗೊಬ್ಬರದ ಕೊರತೆ ಇಲ್ಲ. ಕೃತಕ ಅಭಾವ ಸೃಷ್ಟಿಸಿದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಯೂರಿಯಾ ಅಗತ್ಯಕ್ಕೆ ತಕ್ಕಷ್ಟು ಇದೆ. ಹೆಚ್ಚಿನ ಹಣಕ್ಕೆ ಮಾರಾಟ ಮಾಡಬಾರದು ಎಂದು ಅವರು ತಿಳಿಸಿದರು. ಕೋವಿಡ್-19 ಯಾವಾಗ ಮುಗಿಯುತ್ತೆ ಎಂದು ನಿಶ್ಚಿತವಾಗಿ ಹೇಳಲಾಗಲ್ಲ. ಅದರೊಂದಿಗೆ ಬದುಕು ಕಟ್ಟಿಕೊಳ್ಳುವ ಅನಿವಾರ್ಯ ಸ್ಥಿತಿಯಲ್ಲಿ ಇದ್ದೇವೆ. ಜಿಲ್ಲೆಯ ಕೊರೊನಾ ಅಂಕಿ-ಅಂಶಗಳನ್ನು ಮುಚ್ಚಿಡುವ ಪ್ರಮೇಯವೇ ಇಲ್ಲ. ಪ್ರತಿ ಮಾಹಿತಿಯೂ ಮಾಧ್ಯಮದವರಿಗೆ ಲಬ್ಯವಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಹಾಲಪ್ಪ ಆಚಾರ್, ಬಸವರಾಜ ದಢೇಸೂಗೂರು, ಮುಖಂಡರಾದ ನವೀನ್ ಗುಳಗಣ್ಣವರ್, ಸಿ.ವಿ.ಚಂದ್ರಶೇಖರ, ಚಂದ್ರಶೇಖರಗೌಡ ಹಲಗೇರಿ, ಹಾಲೇಶ್ ಕಂದಾರಿ ಇತರರು ಇದ್ದರು.

Please follow and like us:
error