ಬುಡಕಟ್ಟು ಜನಾಂಗದವರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ

ಕೊಪ್ಪಳ, : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್.15 ರಂದು ನಗರದ ಬಾಲಕರ ಬಾಲಮಂದಿರದ ಹಿಂದುಗಡೆ ಇರುವ ಕೂಗಮ್ಮ ದೇವಸ್ಥಾನದ ಆವರಣದಲ್ಲಿ 75ನೇ ಸ್ವಾತಂತ್ರೊö್ಯÃತ್ಸವದ ಪ್ರಯುಕ್ತ ಭಾರತ ಅಮೃತ ಮಹೆÇÃತ್ಸವ 2021ರ ಕುರಿತು ಬುಡಕಟ್ಟು ಜನಾಂಗದವರಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಟಿ.ಶ್ರೀನಿವಾಸ, ಬುಡಕಟ್ಟು ಸಮುದಾಯಗಳ ಗಿರಿಜನರನ್ನು ಸಮಾಜದಲ್ಲಿ ಮುಖ್ಯವಾಹಿನಿಗೆ ತರಲು ಹೆಚ್ಚಿನ ಮಹತ್ವ ನೀಡಲಾಗಿದೆ. ಬುಡಕಟ್ಟು ಸಮುದಾಯಕ್ಕೆ ಒಂದೊAದು ಪ್ರದೇಶದಲ್ಲಿ ಒಂದೊAದು ರೀತಿಯ ಹೆಸರುಗಳಿವೆ. ಈಗ ಬುಡಕಟ್ಟು ಜನರನ್ನು ಒಕ್ಕಲೆಬ್ಬಿಸುವ ಕಾರ್ಯ ನಡೆಯುತ್ತಿದೆ. ಅವರಿಗೆ ಪರ್ಯಾಯ ವ್ಯವಸ್ಥೆ, ಉದ್ಯೋಗ ಅವಕಾಶ, ಜೀವನಕ್ಕೆ ಅವಶ್ಯವಿರುವ ಸೌಲಭ್ಯಗಳ ಕುರಿತು ಹೆಚ್ಚಿನ ಮಹತ್ವ ನೀಡಲಾಗಿದೆ. ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಎಲ್ಲರೊಂದಿಗೆ ಸಮಾನವಾಗಿ ಬದುಕಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಬುಡಕಟ್ಟು ಜನಾಂದವರ ಪ್ರಮುಖ ಸಮಸ್ಯೆಗಳಾದ ಕುಡಿಯುವ ನೀರು, ಶೌಚಾಲಯ ಮತ್ತು ಮಕ್ಕಳಿಗೆ ಅಂಗನವಾಡಿಗಳ ಸಮಸ್ಯೆಯನ್ನು ಪರಿಹರಿಸಿ, ಸೂಕ್ತ ವ್ಯವಸ್ಥೆ ಒದಗಿಸುವಂತೆ ಕೊಪ್ಪಳ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಸೂಚನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಹೆಚ್.ಮುರಡಿ, ಕಾರ್ಯದರ್ಶಿಗಳಾದ ಬಿ.ವಿ.ಸಜ್ಜನ, ಭಾಗ್ಯನಗರ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಮಂಜು ಬೆಲ್ಲದ್ ಆಗಮಿಸಿದ್ದರು.
ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಪ್ಯಾನಲ್ ವಕೀಲರಾದ ಮೈಲಾರಗೌಡ ಎಂ. ಪಾಟೀಲ್ ಬುಡಕಟ್ಟು ಜನಾಂಗದವರಿಗಾಗಿ ಇರುವ ಕಾನೂನುಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಇಲಾಖೆಯ ಸಹಯಾಕ ನಿರ್ದೇಶಕರಾದ(ಗ್ರೇಡ್-1) ಬಸವರಾಜ ಸಿ. ಯಾದವಾಡ ವಹಿಸಿದ್ದರು. ಪ್ಯಾನಲ್ ವಕೀಲರಾದ ಪ್ರದೀಪ್‌ಕುಮಾರ ಉಡುಪಿ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Please follow and like us:
error