fbpx

ಭಾರತದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ 562ಕ್ಕೆ ಏರಿಕೆ

ಹೊಸದಿಲ್ಲಿ. ಮಾ.25: ಭಾರತದಲ್ಲಿ ಕೊರೋನ  ವೈರಸ್ ಸೋಂಕು ಪೀಡಿತರ ಸಂಖ್ಯೆ 562ಕ್ಕೆ ಏರಿದೆ. ತಮಿಳುನಾಡಿನಲ್ಲಿ ಕೊರೋನ ಸೋಂಕಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಭಾರತದಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿದೆ.

ಕೊರೋನ ವೈರಸ್  ಸೋಂಕಿತ 54 ವರ್ಷದ ವ್ಯಕ್ತಿಯೊಬ್ಬರು ಬುಧವಾರ ಮುಂಜಾನೆ  ತಮಿಳುನಾಡಿನ  ವ್ಯಕ್ತಿಯೊಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ, ಕೊರೋನದಿಂದಾಗಿ ತಮಿಳುನಾಡಿನಲ್ಲಿ ದಾಖಲಾದ ಮೊದಲ ಸಾವು  ಇದಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಸಿ ವಿಜಯ ಭಾಸ್ಕರ್ ತಿಳಿಸಿದ್ದಾರೆ.

ಮೃತಪಟ್ಟ ವ್ಯಕ್ತಿ  ಮಧುಮೇಹ ಕಾಯಿಲೆಯೊಂದಿಗೆ ದೀರ್ಘಕಾಲದ ಅನಾರೋಗ್ಯದ  ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು  ಸಚಿವರು ಮಾಹಿತಿ ನೀಡಿದ್ದಾರೆ.

Please follow and like us:
error
error: Content is protected !!