ಭ್ರಷ್ಟಾಚಾರ ಆರೋಪಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ


Kannadanet ಭಾಗ್ಯನಗರದ ಎಸ್.ಎಸ್.ಕೆ ಕಿರಿಯ ಪ್ರಾಥಮಿಕ ಶಾಲೆಯ ಠೇವಣಿ ನಗದೀಕರಣ ವಿಷಯವಾಗಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಹೊಂದಿರುವ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿದೆ.
ಭಾಗ್ಯನಗರದ ಎಸ್.ಎಸ್.ಕೆ ಕಿರಿಯ ಪ್ರಾಥಮಿಕ ಶಾಲೆಯ ಠೇವಣಿ ನಗದೀಕರಣಕ್ಕಾಗಿ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ವಿಷಯ ನಿರ್ವಾಹಕರಾದ ಅರುಂಧತಿ ಅವರು ರೂ.5000/- ಹಣವನ್ನು ಲಂಚ ಕೇಳಿದ ದೂರಿನ ಮೇಲೆ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ಲಂಚ ಪ್ರತಿಬಂಧಕ ಕಾಯ್ದೆ 1988 ರ ಕಲಂ 7(ಎ) ಅನ್ವಯ ದೂರು ದಾಖಲಿಸಿಕೊಂಡು ಟ್ರಾö್ಯಪ್ ಕಾರ್ಯಾಚರಣೆ ಕೈಗೊಂಡಿತ್ತು. ಕಾರ್ಯಾಚರಣೆಯಲ್ಲಿ ವಿಷಯ ನಿರ್ವಾಹಕಿ ಅರುಂಧತಿ ಅವರು ರೂ.3500/- ಹಣವನ್ನು ಲಂಚವಾಗಿ ಸ್ವೀಕರಿಸುವಾಗ ಅವರನ್ನು ಬಂಧಿಸಲಾಗಿತ್ತು. ನಂತರ ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.

ಲಂಚದ ಆರೋಪಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾರ್ಚ್ 03 ರಿಂದ ಇಲ್ಲಿಯವರೆಗೆ ತಲೆಮರೆಸಿಕೊಂಡಿದ್ದು, ಮೇ 28 ರಂದು ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿದೆ ಎಂದು ಕೊಪ್ಪಳ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Please follow and like us:
error