ಮತಾಂತರ ವಿರೋಧಿ ಮಸೂದೆ ಅಂಗೀಕರಿಸಿದ ಮಧ್ಯಪ್ರದೇಶ

 

ಭೋಪಾಲ್: ಬಿಜೆಪಿ ಆಡಳಿತವಿರುವ ಉತ್ತರಪ್ರದೇಶದ ಬಳಿಕ ಇದೀಗ ಮಧ್ಯಪ್ರದೇಶದಲ್ಲೂ ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಬಲವಂತದ ಧಾರ್ಮಿಕ ಮತಾಂತರವನ್ನು ತಡೆಯುವ ಉದ್ದೇಶದಿಂದ ಮಧ್ಯಪ್ರದೇಶದ ಸಚಿವ ಸಂಪುಟವು ಇಂದು ಮಸೂದೆಯೊಂದನ್ನು ಧ್ವನಿಮತದಿಂದ ಅಂಗೀಕರಿಸಿದೆ. ಈ ಮಸೂದೆ ಕಾನೂನಾಗಿ ಅಂಗೀಕರಿಸಲ್ಪಟ್ಟ ಬಳಿಕ ಇದು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡವನ್ನು ಒಳಗೊಂಡಿರುತ್ತದೆ.

ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಅಧಿವೇಶನಕ್ಕೆ ಮುಂಚಿತವಾಗಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಧರ್ಮ ಸ್ವಾತಂತ್ರ(ಧಾರ್ಮಿಕ ಸ್ವಾತಂತ್ರ)ಮಸೂದೆ 2020ನ್ನು ಮಂಡಿಸಲಾಯಿತು.

ಹೊಸ ಮಸೂದೆಯಡಿಯಲ್ಲಿ ಯಾರೊಬ್ಬರ ಮೇಲೆ ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸಿದರೆ 1-5 ವರ್ಷಗಳ ಜೈಲು ಶಿಕ್ಷೆ ಹಾಗೂ ಕನಿಷ್ಠ 25,000 ರೂ. ದಂಡವನ್ನು ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

 

ಮತಾಂತರಗೊಂಡ ವ್ಯಕ್ತಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳಿಗೆ ಸೇರಿದವರಾಗಿದ್ದರೆ ಕನಿಷ್ಠ 1 ಲಕ್ಷ ದಂಡದೊಂದಿಗೆ ಕನಿಷ್ಠ 2-10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಸಲಾಗುತ್ತದೆ.

ತಮ್ಮ ಧರ್ಮವನ್ನು ಬದಲಾಯಿಸಲು ಬಯಸುವವರು ಎರಡು ತಿಂಗಳ ಮೊದಲು ತಿಳಿಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ವಿಫಲರಾದರೆ ಹೊಸ ಕಾನೂನಿನಡಿಯಲ್ಲಿ ಮದುವೆಯನ್ನು ಅನೂರ್ಜಿತ ಎಂದು ಪರಿಗಣಿಸಲಾಗುತ್ತದೆ.

 

Please follow and like us:
error