ಮತ್ತೆ ಕರೋನಾ ಪಾಜಿಟಿವ್ : ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ದಾಖಲು

ಬೆಂಗಳೂರು : ಸತತವಾಗಿ  ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ  ಮತ್ತೆ ಕರೋನಾ ಪಾಜಿಟಿವ್ ಬಂದಿರುವುದು ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ಧಾರೆ

Please follow and like us:
error