ಮತ್ತೆ ಲಾಕ್ ಡೌನ್ ಬಗ್ಗೆ ಸಿಎಂ ಯಡಿಯೂರಪ್ಪ ಹೇಳಿದ್ದೇನು ?

ಬೆಂಗಳೂರು ನಗರ ಮತ್ತೆ ಲಾಕ್ಡೌನ್ ಆಗಬಾರದು ಎಂಬುದು ನಮ್ಮ ಆಶಯವಾಗಿದೆ. ಅದಕ್ಕಾಗಿ ಜನ ಸಹಕಾರ ಕೊಡಬೇಕು.‌ ಸುರಕ್ಷಿತ ಅಂತರ ಕಾಪಾಡಿಕೊಳ್ಳುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರಿನ ಸಮಸ್ತ ನಾಗರಿಕ ಬಂಧುಗಳಲ್ಲಿ ಮನವಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು.ಹಾಗಾಗಿ, ಸರ್ಕಾರದ ಹೋರಾಟದೊಂದಿಗೆ ಜತೆಯಾಗಲು ಸ್ವಯಂಪ್ರೇರಿತರಾಗಿ ನೋಂದಾಯಿಸಿಕೊಳ್ಳುವ ಮೂಲಕ ಸೋಂಕು ನಿಯಂತ್ರಿಸುವ ಕೆಲಸದಲ್ಲಿ ಕೈಜೋಡಿಸಬಹುದು.

 

Please follow and like us:
error