ಮತ್ತೆ ಹೋರಾಟಕ್ಕೆ ಸಜ್ಜಾದ ಆಶಾ ಕಾರ್ಯಕರ್ತೆಯರು

ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳ ಈಡೇರಿಸದೆ ಹಿನ್ನಲೆಯಲ್ಲಿ ಕೊಟ್ಟ ಮಾತಿಗೆ ತಪ್ಪಿದ ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕಿಳಿಯಲು ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ಸೆಪ್ಟೆಂಬರ್ 22ರಂದು ಜಿಲ್ಲಾ ಮಟ್ಟದಲ್ಲಿ ಸೆಪ್ಟೆಂಬರ್ 23ರಂದು ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸಲು
 ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷ ಶರಣು ಗಡ್ಡಿ ಹೇಳಿದ್ದಾರೆ.ಶನಿವಾರ ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ಮಾಡಿ ದಿನಾಂಕ 20 ರಂದು ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರಿಗೆ ಮನವಿ ಸಲ್ಲಿಸಿ ಇದೆ 21ನೇ ತಾರೀಕು ವಿಧಾನಮಂಡಲ ಅಧಿವೇಶನದಲ್ಲಿ ಆಶಾ ಕಾರ್ಯಕರ್ತರ ಬೇಡಿಕೆಗಳ ಬಗ್ಗೆ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು . ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜುಲೈ 10 ರಿಂದ 29ರವರೆಗೆ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗಿತ್ತು. ಆಗ ಸರ್ಕಾರ ಮತ್ತು ಆರೋಗ್ಯ ಮಂತ್ರಿಗಳು ಇನ್ನೂ ಎರಡು ದಿನಗಳಲ್ಲಿ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಮುಷ್ಕರ ಮುಗಿದು 49 ದಿನಗಳು ಕಳೆದರು ಯಾವ ಅಧಿಕೃತ ಆದೇಶ ಇಲ್ಲಿವರೆಗೂ ಹೊರಬಿದ್ದಿಲ್ಲ. ಆದ್ದರಿಂದ ಈಗ ಮತ್ತೆ ಆಶಾ ಕಾರ್ಯಕರ್ತೆಯರು ಹೋರಾಟಕ್ಕಿಳಿಯುವುದು ಅನಿವಾರ್ಯವಾಗಿದೆ. ಭರವಸೆಯಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಸಂಬಳ 12000 ಸಾವಿರ ರೂಪಾಯಿ ಕೂಡಲೇ ಘೋಷಿಸಬೇಕು.
ಬಾಕಿ ಇರುವ ಪ್ರೋತ್ಸಾಹಧನ ಆಶಾ ಕಾರ್ಯಕರ್ತರಿಗೂ ಒದಗಿಸಲು ಕ್ರಮ ಕೈಗೊಳ್ಳಬೇಕು.ಈಗಾಗಲೇ ಘೋಷಿಸಿದ ರೂ. 3000 ಕೋವಿಡ್ ಪ್ರೋತ್ಸಾಹಧನವನ್ನು ಇನ್ನೂ ತಲುಪದಿರುವ ಆಶಾಗಳಿಗೆ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಅಧ್ಯಕ್ಷ ಶರಣು ಗಡ್ಡಿ ಜಿಲ್ಲಾ ಕಾರ್ಯದರ್ಶಿ ಕೌಶಲ್ಯ ಹಿರೇಗೌಡರ್ ಆಶಾ ಕಾರ್ಯಕರ್ತೆಯರ ಮುಖಂಡರಾದ ಗಿರಿಜಮ್ಮ,ಶಾಂತಮ್ಮ, ಶಾರದಾ, ಅನ್ನಪೂರ್ಣ, ಸುನಿತಾ ,ಶಬಾನಾ, ಮುಂತಾದವರು ಭಾಗವಹಿಸಿದ್ದರು.
Please follow and like us:
error