ಮನೆಯಲ್ಲಿದ್ದುಕೊಂಡೇ ಯುಗಾದಿ ಹಬ್ಬವನ್ನು ಆಚರಿಸಿ: ಬಿಎಸ್ ವೈ

ಬೆಂಗಳೂರು, ಮಾ.24:ಯುಗಾದಿ ಹಬ್ಬವನ್ನು ಆಡಂಬರದಿಂದ ಆಚರಿಸುವ ಅಗತ್ಯವಿಲ್ಲ. ಮನೆಯಲ್ಲಿದ್ದುಕೊಂಡೇ ಯುಗಾದಿ ಹಬ್ಬ ಆಚರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಬ್ಬದ ಖರೀದಿಗಾಗಿ ಯಾರೂ ಮಾರುಕಟ್ಟೆಗೆ ಹೋಗಬೇಡಿ. ಅಗತ್ಯ ವಸ್ತುಗಳ ಖರೀದಿಗೆ ಯಾವುದೇ  ಸಮಸ್ಯೆ ಇಲ್ಲ.  ಅಗತ್ಯ ವಸ್ತುಗಳ ಖರೀದಿ ವೇಳೆ ಜನರಿಗೆ ಪೊಲೀಸರು ಅಡ್ಡಿಪಡಿಸಬಾರದು.ಜನರಿಗೆ ಅವಕಾಶ ಮಾಡಿಕೊಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

8 ದಿನಗಳ ಕಾಲ ಜನರು ಸಹಕಾರ ನೀಡಬೇಕು. ಮಾರ್ಚ್ 31ರ ತನಕ ಎಲ್ಲರೂ ಮನೆಯಲ್ಲಿರಬೇಕು.  ಅನಗತ್ಯವಾಗಿ ಮನೆಯಿಂದ ಹೊರಬಂದರೆ ಕ್ರಮ ಕೈಗೊಳ್ಳಲಾಗುವುದು ಪೊಲೀಸರು ಕ್ರಮ ಕೈಗೊಂಡರೆ ನನ್ನನ್ನು ದೂಷಿಸಬೇಡಿ  ಎಂದು ಅಭಿಪ್ರಾಯಪಟ್ಟರು.

ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆ ಕ್ಯಾನ್ಸಲ್ ಮಾಡಲಾಗಿದೆ. ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆಗೆ ಅವಕಾಶ ನೀಡಲಾಗಿದೆ. ದುಬಾರಿ ಹಣ ತೆಗೆದುಕೊಂಡರೆ ಕ್ರಮ ಕೈಗೊಳ್ಳಲಾಗುವುದು   ಎಂದು ಮುಖ್ಯ ಮಂತ್ರಿ ಬಿಎಸ್ ವೈ ಎಚ್ಚರಿಕೆ ನೀಡಿದರು..

Please follow and like us:
error