ಮಹಾತ್ಮ ಗಾಂಧೀಜಿಯವರು ಸ್ವಾತಂತ್ರö್ಯ ಹೋರಾಟದಲ್ಲಿ ದೇಶದ ಬೆನ್ನೆಲುಬಾಗಿದ್ದರು : ವಿಕಾಸ್ ಕಿಶೋರ್ ಸುರಳ್ಕರ್


ಕೊಪ್ಪಳ, : ಮಹಾತ್ಮ ಗಾಂಧೀಜಿಯವರು ಅಹಿಂಸಾ ಮಾರ್ಗದಿಂದ ಎಲ್ಲರನ್ನೂ ಒಂದುಗೂಡಿಸಿ, ದೇಶದ ಬೆನ್ನೆಲುಬಾಗಿ ಸ್ವಾತಂತ್ರö್ಯಕ್ಕಾಗಿ ಹೋರಾಡಿ ನಮಗೆ ಸ್ವಾತಂತ್ರö್ಯ ತಂದುಕೊಟ್ಟರು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತಿç ಅವರ ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸಾ ಮಾರ್ಗ ಅನುಸರಿಸಿ, ಎಲ್ಲರಲ್ಲೂ ದೇಶದ ಕುರಿತು ಅಭಿಮಾನ ಹೆಚ್ಚಿಸಿ, ಸ್ವಾತಂತ್ರö್ಯದ ಬಗ್ಗೆ ಕಿಚ್ಚು ಹೆಚ್ಚುವಂತೆ ಮಾಡಿ, ಅವಿರತ ಹೋರಾಡಿ ನಮ್ಮ ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟರು. ಅವರ ಅಹಿಂಸಾ ತತ್ವವನ್ನು ಇಂದು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.
ಲಾಲ್‌ಬಹದ್ದೂರ್ ಶಾಸ್ತಿç ಅವರು ತಮ್ಮ ಸರಳ, ಸಜ್ಜನಿಕೆ ಹಾಗೂ ಪ್ರಾಮಾಣಿಕತೆಯಿಂದಲೇ ಹೆಸರಾದವರು. ದೇಶದ ಪ್ರಧಾನಿಯಾದರೂ ಸರಳ ಜೀವನ ನಡೆಸಿದವರು. ಪ್ರಾಮಾಣಿಕ ಆಡಳಿತದಿಂದ ಸರ್ಕಾರಿ ಸೇವೆಯನ್ನು ದೇವರ ಸೇವೆ ಎಂಬAತೆ ದೇಶಕ್ಕೆ ಸೇವೆ ಸಲ್ಲಿಸಿ, ನಮಗೆಲ್ಲ ಆದರ್ಶನೀಯರಾಗಿದ್ದಾರೆ. ಮಹನೀಯರ ಕುರಿತು ಪುಸ್ತಕಗಳನ್ನು ಓದುವುದರ ಮೂಲಕ ಅವರ ಜೀವನಶೈಲಿ, ತತ್ವ, ಆದರ್ಶಗಳನ್ನು ಅರಿತುಕೊಳ್ಳಬೇಕು. ಪ್ರಾಮಾಣಿಕತೆ ಮತ್ತು ಅಹಿಂಸಾ ತತ್ವದೊಂದಿಗೆ ನಾವು ಬದುಕಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಸಹಾಯಕ ಆಯುಕ್ತ ನಾರಯಣರಡ್ಡಿ ಕನಕರಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೊಡ್ಡಬಸಪ್ಪ ನೀರಲಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲ ಸಿಬ್ಬಂದಿ ಸೇರಿದಂತೆ ಜಿಲ್ಲಾಡಳಿತ ಭವನದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error