ಮಹಾರಾಷ್ಟ್ರದಿಂದ ಬರುವವರ ಕ್ವಾರಂಟೈನ್ ಅವಧಿ ವಿಸ್ತರಿಸಿದ ರಾಜ್ಯ ಸರಕಾರ

ಹೆಚ್ಚುತ್ತಿರುವ ಕೊರೋನ ಸೋಂಕು:

ಬೆಂಗಳೂರು, : ರಾಜ್ಯದಲ್ಲಿ ದಿನೇ ದಿನೇ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಅವಧಿಯನ್ನು ವಿಸ್ತರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಮಹಾರಾಷ್ಟ್ರದಿಂದ ಬಂದವರಿಂದ ಅತೀ ಹೆಚ್ಚಿನ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆ ರಾಜ್ಯದಿಂದ ಬಂದಿರುವವರ ಕ್ವಾರಂಟೈನ್ ಅವಧಿಯನ್ನು 14 ದಿನದಿಂದ 21 ದಿನಗಳ ಕಾಲ ಏರಿಕೆ ಮಾಡಲಾಗಿದೆ.

ಮಹಾರಾಷ್ಷ್ರದಿಂದ ಬಂದವರಿಗೆ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನಗಳ ಹೋಂ ಕ್ವಾರಂಟೈನ್ ಇದ್ದು ಇದೀಗ ಹೋಂ ಕ್ವಾರಂಟೈನ್ ಅವಧಿಯನ್ನು ಇನ್ನೂ 7 ದಿನಗಳ ಕಾಲ ಹೆಚ್ಚಳ ಮಾಡಲಾಗಿದೆ. ಹೀಗಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿರುವುದು ಕಡ್ಡಾಯವಾಗಿದೆ.

ರಾಜ್ಯದಲ್ಲಿ ಕಂಡು ಬರುತ್ತಿರುವ ಪ್ರಕರಣಗಳ ಪೈಕಿ ಬಹುತೇಕ ಪ್ರಕರಣಗಳು ಮಹಾರಾಷ್ಟ್ರ ಲಿಂಕ್ ಹೊಂದಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಕ್ವಾರಂಟೈನ್ ಅವಧಿಯನ್ನು ಹೆಚ್ಚಿಗೆ ಮಾಡಲಾಗಿದೆ.

Please follow and like us:
error