ಮಹಾರಾಷ್ಟ್ರ ಚುನಾವಣೆ: ಬಿಜೆಪಿ ಪ್ರಣಾಳಿಕೆಯಲ್ಲಿ ಸಾವರ್ಕರ್‌ಗೆ ಭಾರತ ರತ್ನ ನೀಡುವ ಭರವಸೆ

ಮುಂಬೈ, : ಮಹಾರಾಷ್ಟ್ರ ವಿಧಾನಸಭೆಗೆ ಅ.21ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ.  ಸಾವರ್ಕರ್‌, ಮಹಾತ್ಮ ಫುಲೆ ಹಾಗೂ  ಸಾವಿತ್ರಿಬಾಯಿ ಫುಲೆ  ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಪ್ರಸ್ತಾವಿಸಲಾಗಿದೆ. ಮುಂದಿನ 5 ವರ್ಷಗಳಲ್ಲಿ 1 ಕೋಟಿ ಉದ್ಯೋಗ, ಉತ್ತಮ ಆರೋಗ್ಯಸಂರಕ್ಷಣಾ ವ್ಯವಸ್ಥೆಗಳು, 2022ರ ವೇಳೆಗೆ ಸೂರಿಲ್ಲದವರಿಗೆ ಸೂರು, ಮೂಲಭೂತ ಸೌಕರ್ಯಕ್ಕೆ 5 ಲಕ್ಷ ಕೋಟಿ ರೂ. ಹೂಡಿಕೆ, ಕಾರ್ಮಿಕರಿಗೆ ಸಾಮಾಜಿಕ ಸುರಕ್ಷತಾ ಜಾಲ, ಆರೋಗ್ಯವಂತ ಹಾಗೂ ಉತ್ತಮ ಶಿಕ್ಷಣ ನೀಡುವ ಭರವಸೆಯನ್ನು ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ.

ಬಿಜೆಪಿಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

Please follow and like us:
error