ಮಾಜಿ ಸಚಿವ ಮುರುಗೇಶ್ ನಿರಾಣಿ ದೇವರ ಕುರಿತ ವಿಚಾರ : ಕೆಟ್ಟ ನಡೆ ನುಡಿ -ಸಿದ್ದರಾಮಯ್ಯ ಮಾಜಿ ಸಿಎಂ

ದೇವರನ್ನು ಗೇಲಿ-ಅವಹೇಳನ ಮಾಡುವುದು ವಿಕೃತಿ.

ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಹಿಂದೂ ದೇವರುಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾದ ವಿಚಾರ ಮಾಧ್ಯಮಗಳ‌ ಮೂಲಕ ಗಮನಕ್ಕೆ ಬಂತು‌. ಇದು ನಿಜವಾಗಿದ್ದರೆ, ಬಹಳ ಕೆಟ್ಟ ನಡೆ-ನುಡಿ ಎಂದು ಹೇಳಬೇಕಾಗುತ್ತದೆ. ದೇವರು ಮತ್ತು ಧರ್ಮ ಅವರವರ ನಂಬಿಕೆ, ಅದನ್ನು ನಾವು ಗೌರವಿಸಬೇಕು ಅವಹೇಳನ ಮಾಡಬಾರದು. ದೇವರು ಧರ್ಮದ ಹೆಸರಲ್ಲಿ ಮುಗ್ಧರ ಶೋಷಣೆ, ಮೂಢನಂಬಿಕೆಯ ಆಚರಣೆ ಮಾಡುವುದು ತಪ್ಪು. ರಾಜಕೀಯ ಇಲ್ಲವೇ ಇನ್ನಾವುದೋ ಸ್ವಾರ್ಥಸಾಧನೆಗಾಗಿ ದೇವರು- ಧರ್ಮವನ್ನು ದುರ್ಬಳಕೆ ಮಾಡುವುದುಕೂಡಾ ತಪ್ಪು ಆದರೆ.. ದೇವರನ್ನು ಗೇಲಿ-ಅವಹೇಳನ ಮಾಡುವುದು ವಿಕೃತಿ. ಇದನ್ನು ಯಾರು ಮಾಡಿದರೂ ಖಂಡನೀಯ ಎಂದು ಹೇಳಿದ್ಧಾರೆ

Please follow and like us:
error