ಮಾಜಿ ಸಚಿವ ಶಿವಕುಮಾರ್‌ಗೆ ದಿಲ್ಲಿ ಹೈಕೋರ್ಟ್ ಜಾಮೀನು

ಹೊಸದಿಲ್ಲಿ,ಅ.23: ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್‌ಗೆ ದಿಲ್ಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ. ಈ ಮೂಲಕ 50 ದಿನಗಳ ಜೈಲು ವಾಸಕ್ಕೆ ಮುಕ್ತಿ ಲಭಿಸಿದೆ.

ಈ.ಡಿ.ವಿಶೇಷ ನ್ಯಾಯಾಲಯ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾ ಮಾಡಿದ ಹಿನ್ನೆಲೆಯಲ್ಲಿ ಡಿಕೆಶಿ ಪರ ವಕೀಲರು ದಿಲ್ಲಿ ಹೈಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸುರೇಶ್ ಕುಮಾರ್ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿದ್ದರು.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್‌ ಬುಧವಾರ ಜಾಮೀನು ಮಂಜೂರು ಮಾಡಿದೆ.

 

Please follow and like us:

Related posts