fbpx

ಮಾಜಿ ಸಿಎಂ ಸಿದ್ದರಾಮಯ್ಯರಿಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿರುಗೇಟು

ಬೆಂಗಳೂರು : ಮಾನ್ಯ ಸಿದ್ದರಾಮಯ್ಯನವರು ನಾನು ಅಧಿಕಾರದ ಅಹಂನಿಂದ ಮಾತನಾಡಿದ್ದೇನೆ ಮತ್ತು ನನಗೆ ಉಪಕಾರ ಸ್ಮರಣೆ ಇರಬೇಕು ಎಂದಿದ್ದಾರೆ. ಅವರು ಹಿಂದೆ ನೀಡಿರುವ ಸಹಕಾರ ಮತ್ತು ಮಾರ್ಗದರ್ಶನವನ್ನು ಸದಾ ಸ್ಮರಿಸುತ್ತೇನೆ ಮತ್ತು ನನ್ನ ಅಳಿಲು ಸೇವೆಯನ್ನು ಅವರೂ ಸಹ ಮರೆತಿಲ್ಲ ಎಂದು ಭಾವಿಸಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ.

ಇಂದು ಬೆಳಿಗ್ಗೆ ಸಿದ್ದರಾಮಯ್ಯನವರು ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯೆ ಮಾಡಿರುವ ಸಚಿವ ಸುಧಾಕರ್  ಕಳೆದ 5 ತಿಂಗಳಿನಿಂದ ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತು ಕಾರ್ಯ ಕ್ಷಮತೆಯಿಂದ ಅವಿರತವಾಗಿ ಶ್ರಮಿಸುತ್ತಿರುವ ಸನ್ನಿವೇಶದಲ್ಲಿ ನನ್ನ ಇಲಾಖೆಯ ವಿರುದ್ಧ ಸತ್ಯಕ್ಕೆ ದೂರವಾದ ಅರೋಪಗಳು ಬಂದಾಗ ಜವಾಬ್ದಾರಿಯುತವಾಗಿ ವಾಸ್ತವಾಂಶವನ್ನು ಜನರ ಮುಂದಿಟ್ಟದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ನಿಂದನೆ ಅಥವಾ ಅಪಹಾಸ್ಯದ ಉದ್ದೇಶವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Please follow and like us:
error
error: Content is protected !!