ಮಾರ್ಚ್ 27 ರಂದು ಮೇಗಾ ಲೋಕ್ ಅದಾಲತ್

ಕೊಪ್ಪಳ,   ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು “ಮೇಗಾ ಲೋಕ್ ಅದಾಲತ್” ಕಾರ್ಯಕ್ರಮವನ್ನು ಮಾರ್ಚ್ 27 ರಂದು ಜಿಲ್ಲೆಯಾದ್ಯಂತ ಆಚರಿಸಲಾಗುತ್ತಿದೆ.
ರಾಜ್ಯ ಕಾನೂನು ಸೇವೆಗಳ ಪಾಧಿಕಾರ ಇವರ ನಿರ್ದೇಶನದ ಮೇರಗೆ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಅಂತಾ ಪರಿಗಣಿಸಿ ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬAಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮೀನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಹಾಗೂ ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಮಾರ್ಚ್ 27 ರಂದು ಜಿಲ್ಲೆಯ ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿಕೊಳ್ಳಲು ಮೇಗಾ ಲೋಕ್ ಅದಾಲತ್‌ನ್ನು ಏರ್ಪಡಿಸಲಾಗಿದೆ.  ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿಜಯಲಕ್ಷಿö್ಮÃದೇವಿ ಮತ್ತು ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ್  ತಿಳಿಸಿದ್ದಾರೆ.

Please follow and like us:
error