ಮಾ.31ರವರೆಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಸಾಮೂಹಿಕ ನಮಾಝ್ ನಿಲ್ಲಿಸಲು ಸರಕಾರ ಶಿಫಾರಸು

ಬೆಂಗಳೂರು, ಮಾ.23: ಕೊರೊನ ವೈರಸ್ ತಡೆಗಟ್ಟುವ ಕ್ರಮವಾಗಿ ರಾಜ್ಯದ ಎಲ್ಲ ಮಸೀದಿಗಳಲ್ಲಿ  ಮಾರ್ಚ್ 31ರವರೆಗೆ ಜುಮಾ ಸಹಿತ ಎಲ್ಲ ಸಾಮೂಹಿಕ ನಮಾಝ್ ಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ರಾಜ್ಯ ಸರಕಾರ ಮಸೀದಿಗಳಿಗೆ ಶಿಫಾರಸು ಮಾಡಿದೆ.

ಈ ಬಗ್ಗೆ ರಾಜ್ಯ ಅಲ್ಪಸಂಖ್ಯಾತ ಇಲಾಖೆ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಅವರು ಪ್ರಕಟಣೆ ಹೊರಡಿಸಿದ್ದಾರೆ. ಜೊತೆಗೆ ಕೊರೊನಕ್ಕೆ ಕಡಿವಾಣ ಹಾಕಲು ಆಯಾ ಜಿಲ್ಲಾಡಳಿತ ಹಾಗು ಆರೋಗ್ಯ ಇಲಾಖೆ ಮಸೀದಿ, ಮದ್ರಸಗಳಿಗೆ  ನೀಡುವ ಯಾವುದೇ ಸೂಚನೆಗಳನ್ನು ಜಾರಿಗೆ ತರುವ ಜವಾಬ್ದಾರಿ ಆಯಾ ಜಿಲ್ಲಾ ವಕ್ಫ್ ಅಧಿಕಾರಿಗಳಿಗೆ ಇದೆ ಎಂದು ಪ್ರಕಟಣೆ ತಿಳಿಸಿದೆ.

Please follow and like us:
error