ಮುನಿರತ್ನ ವಿರುದ್ಧದ ಚುನಾವಣಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ : ಅನರ್ಹ ಶಾಸಕ  ನಿರಾಳ

ಬೆಂಗಳೂರು  2018ರಲ್ಲಿ ಜಯಿಸಿದ್ದ ಮುನಿರತ್ನ ಅವರ ಆಯ್ಕೆಯನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿ ಆದೇಶಿಸಿದೆ. ಕಳೆದ ವಾರ ಈ ಮೇಲ್ಮನವಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನೇತೃತ್ವದ ಪೀಠ ಈ ಆದೇಶ ನೀಡಿದೆ. ಇದೀಗ ಸುಪ್ರೀಂ ಕೋರ್ಟ್ ಆದೇಶ ಹೊರಬಿದ್ದಿರುವುದರಿಂದ, ಇತ್ತೀಚೆಗೆ ಬಿಜೆಪಿ ಸೇರಿಕೊಂಡು ಟಿಕೆಟ್ ಆಕಾಂಕ್ಷಿಯೂ ಆಗಿರುವ ಅನರ್ಹ ಶಾಸಕ ಮುನಿರತ್ನ ರ ಸ್ಪರ್ಧೆ ನಿರಾತಂಕವಾವಾಗಿದೆ. 2018ರಲ್ಲಿ ಕಾಂಗ್ರೆಸ್ ಪಕ್ಷದ ಮುನಿರತ್ನ ಅವರು ಮತದಾರರ ನಕಲಿ ಗುರುತಿನ ಚೀಟಿ ಬಳಸಿ ಮತ ಪಡೆದು ಅಕ್ರಮವಾಗಿ ಜಯಿಸಿದ್ದಾರೆ ಎಂದು ಆರೋಪಿಸಿ ಪರಾಜಿತ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡ ರಾಜ್ಯ ಹೈಕೋರ್ಟ್‌ಗೆ ಚುನಾವಣೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸದೆ ಬಾಕಿಯಿರಿಸಿರುವ ಹೈಕೋರ್ಟ್, ಈ ಕ್ಷೇತ್ರದ ಚುನಾವಣೆ ನಡೆಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Please follow and like us:
error