ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಬಜೆಟ್ ನೆರವು: ಸಿಎಂ ಬಿಎಸ್ ವೈ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವ ಮೂಲಕ ಬಜೆಟ್ ನಲ್ಲೂ ಸರ್ಕಾರದ ನೆರವಿನ ಸ್ಪಂದನೆ‌ ಮುಂದುವರೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷ ಶಿವಾನಂದ ತಗಡೂರು  ನೀಡಿದ ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಅವರು, ರಾಜ್ಯದ ಹಣಕಾಸು ಸ್ಥಿತಿ ಸಂಕಷ್ಟದಲ್ಲಿ ಇದ್ದಾಗಲೂ ನೊಂದ ಪತ್ರಕರ್ತರ ಕುಟುಂಬಗಳಿಗೆ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಸಂಘದ ಮನವಿಗೆ ಸ್ಪಂದಿಸಿ, ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಕುಟುಂಬಗಳಿಗೆ ನೆರವು ನೀಡುವ ಮೂಲಕ ಅವರ ಕಣ್ಣೀರು ಒರೆಸುವ ನಿಟ್ಟಿನಲ್ಲಿ ದೇಶದಲ್ಲಿಯೇ ರಾಜ್ಯ ಮಾದರಿಯಾಗಿದೆ ಎಂದ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು, ಅದಕ್ಕಾಗಿ ಸಮಸ್ತ ಪತ್ರಕರ್ತರ ಪರವಾಗಿ ಅಭಿನಂದನೆ ಸಲ್ಲಿಸಿದರು.

ನ್ಯೂಸ್ 18 ಟಿವಿ ರಾಜಕೀಯ ವಿಭಾಗದ ಮುಖ್ಯಸ್ಥ ಚಿದಾನಂದ ಪಟೇಲ್ ಮತ್ತಿತರರು ಹಾಜರಿದ್ದರು.

Please follow and like us:
error