ಮೆಗಾಸ್ಟಾರ್ ಚಿರಂಜೀವಿಗೆ ಕರೋನಾ ಪಾಜಿಟಿವ್

ಹೈದರಾಬಾದ್: ತನಗೆ ನೊವೆಲ್ ಕೊರೋನ ವೈರಸ್ ಸೋಂಕು ತಗಲಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ಟ್ವಿಟ್ಟರ್‌ನಲ್ಲಿ ಸೋಮವಾರ ತಿಳಿಸಿದ್ದಾರೆ.  ‘ಆಚಾರ್ಯ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವ ಮೊದಲು ಕಡ್ಡಾಯ ಕೋವಿಡ್-19 ಪರೀಕ್ಷೆಗೆ ಒಳಗಾದಾಗ ಸೋಂಕು ತಗಲಿರುವುದು ದೃಢಪಟ್ಟಿದೆ. ಅವರಲ್ಲಿ ಯಾವುದೇ ಸೋಂಕಿನ ಗುಣಲಕಣವಿರಲಿಲ್ಲ. ಇದೀಗ ಅವರು ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ. ಕಳೆದ ಐದು ದಿನಗಳಿಂದ ತನ್ನೊಂದಿಗೆ ಸಂಪರ್ಕಕ್ಕೆ ಬಂದಿರುವವರು ಕೊರೋನ ಪರೀಕ್ಷೆಗೆ ಒಳಗಾಗಬೇಕೆಂದು ಚಿರಂಜೀವಿ ವಿನಂತಿಸಿದ್ದಾರೆ.

 

Please follow and like us:
error