ಕೊಪ್ಪಳ,: ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಮೇಗಾ ಇ-ಲೋಕ್ ಅದಾಲತ್ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 3862 ಪ್ರಕರಣಗಳ ಇತ್ಯರ್ಥಗೊಂಡಿವೆ.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಶನಿವಾರದಂದು (ಸೆ. 19) ಜಿಲ್ಲೆಯ ಗಂಗಾವತಿ, ಕುಷ್ಟಗಿ ಯಲಬುರ್ಗಾ ಮತ್ತು ಕೊಪ್ಪಳ ನ್ಯಾಯಾಲಯಗಳಲ್ಲಿ “ಮೇಗಾ ಇ-ಲೋಕ್ ಆದಾಲತ್ನ್ನು“ ವಿದ್ಯುನ್ಮಾನದ ಮೂಲಕ ಏರ್ಪಡಿಸಲಾಗಿತ್ತು. ಈ ಲೋಕ್ ಅದಾಲತ್ನಲ್ಲಿ ನ್ಯಾಯಾಲಯದಲ್ಲಿರುವ ಚಾಲ್ತಿ ಪ್ರಕರಣಗಳು ಹಾಗೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು-79, ಸಿವಿಲ್ ಪ್ರಕರಣಗಳು-297, ರಾಜೀ ಆಗಬಹÅದಾದ ಕ್ರಿಮಿನಲ್ ಪ್ರಕರಣಗಳು-95, ಚೆಕ್ ಬೌನ್ಸ್ ಪ್ರಕರಣಗಳು-26, ಇತರೆ ಕ್ರಿಮಿನಲ್ ಪ್ರಕರಣಗಳು-613, ವ್ಯಾಜ್ಯ ಇತರಪೂರ್ವ ಪ್ರಕರಣಗಳು-844, ವಿದ್ಯುತ್ ಅಥವಾ ನೀರಿನ ಬಿಲ್ ಪ್ರಕರಣಗಳು-330 ಹಾಗೂ ಇತರೆ ಪ್ರಕರಣಗಳು-1578 ಸೇರಿದಂತೆ ಒಟ್ಟು-3862 ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿ ಒಟ್ಟು ರೂ. 7,05,51,955/- ಮೊತ್ತದ ಪರಿಹಾರ ಹಣವನ್ನು ರಾಜೀ ಮೂಲಕ ಇತ್ಯರ್ಥ ಪಡಿಸಲಾಯಿತು ಎಂದು ಕೊಪ್ಪಳ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಲ್. ವಿಜಯಲಕ್ಷಿö್ಮÃದೇವಿ ಮತ್ತು ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ಟಿ.ಶ್ರೀನಿವಾಸ ಅವರು ತಿಳಿಸಿದ್ದಾರೆ. ಅಲ್ಲದೇ ಈ ಲೋಕ್ ಅದಾಲತ್ಗೆ ಸಹಕರಿಸಿದ ಜಿಲ್ಲೆಯ ಎಲ್ಲ ನ್ಯಾಯಾಧೀಶರುಗಳಿಗೆ, ಸಂಧಾನಕಾರರಿಗೆ, ವಕೀಲರ ಸಂಘಗಳ ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳಿಗೆ, ಬ್ಯಾಂಕ್ ಅಥವಾ ಇನ್ಸೂರೆನ್ಸ ಕಂಪನಿ ಮ್ಯಾನೇಜರ್ಗಳಿಗೆ, ಕಕ್ಷಿದಾರರಿಗೆ ಮತ್ತು ನ್ಯಾಯಾಲಯಗಳ ಸಿಬ್ಬಂದಿಗಳಿಗೆ ಹೃತ್ಪೂರಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ
ಮೇಗಾ ಇ-ಲೋಕ್ ಅದಾಲತ್ನಲ್ಲಿ ಜಿಲ್ಲೆಯಾದ್ಯಂತ 3862 ಪ್ರಕರಣಗಳ ಇತ್ಯರ್ಥ
Please follow and like us: