ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಕೊಪ್ಪಳ, ಜೂ. ೨೦: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೧೮ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಾಗಿ ಸಲ್ಲಿಸಲ್ಪಡುವ ಕೃತಿಯು ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ ೧/೮ ಡೆಮ್ಮಿ ಅಳತೆಯಲ್ಲಿ ಕನಿಷ್ಟ ೬೦ ಪುಟಗಳಿರಬೇಕು. ಅನುವಾದ, ಪಠ್ಯ ಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೇ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ ಅಥವಾ ಸಂಗತಿಗಳು ಪ್ರಸ್ತಾಪವಾಗಿರಬಾರದು.
ಅರ್ಜಿದಾರರು ೧೮ ರಿಂದ ೩೫ ವರ್ಷದವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢಿಕೃತ ಎಸ್‌ಎಸ್‌ಎಲ್‌ಸಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಯನ್ನು ಅಥವಾ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಅರ್ಜಿಯನ್ನು ಜುಲೈ ೦೬ ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨ ಇವರಿಗೆ ಸಲ್ಲಿಸಬಹುದು

Please follow and like us: