ರಾಜ್ಯದಲ್ಲಿ ಇಂದು 14 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ

ಹಸಿರು ವಲಯದಲ್ಲಿದ್ದ ಹಾಸನ ಜಿಲ್ಲೆಯಲ್ಲಿ ಮೊದಲ ಪಾಸಿಟಿವ್ ಪ್ರಕರಣ

ಬೆಂಗಳೂರು, ಮೇ.11: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಹರಡುವ ಪ್ರಮಾಣ ತೀವ್ರಗೊಂಡಿದ್ದು, ರವಿವಾರ ಸಂಜೆ 5ರಿಂದ ಇಂದು ಸಂಜೆ 5 ಗಂಟೆ ವರೆಗಿನ ಅವಧಿಯಲ್ಲಿ ಒಟ್ಟು 14 ಮಂದಿಯಲ್ಲಿ ಹೊಸದಾಗಿ ಕೊರೋನ ಸೋಂಕು ದೃಢಪಟ್ಟಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿರುವ ಬುಲೆಟಿನ್ ‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ.

ಈ ಪೈಕಿ ದಾವಣಗೆರೆಯಲ್ಲಿ 3, ಬೀದರ್ 2, ಬಾಗಲಕೋಟೆ 2, ಹಾವೇರಿ, ವಿಜಯಪುರ, ಮಂಡ್ಯ, ಬೆಂಗಳೂರು ನಗರ, ಕಲಬುರಗಿ ಹಾಗೂ ಇದುವರೆಗೆ ಹಸಿರು ವಲಯದಲ್ಲಿದ್ದ ಹಾಸನ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ. ಆಂದ್ರ ಪ್ರದೇಶದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಒಟ್ಟಾರೆ ರಾಜ್ಯದಲ್ಲಿ ಕೊರೋನ ಸೋಂಕು ದೃಢಪಟ್ಟ 862 ಮಂದಿಯ ಪೈಕಿ ಇದುವರೆಗೆ 426 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ ಮತ್ತು 31 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Please follow and like us:
error