fbpx

ರಾಜ್ಯದಲ್ಲಿ ಇಂದು 23 ಮಂದಿಗೆ ಕೊರೋನ ಪಾಸಿಟಿವ್ ದೃಢ

ಕೋವಿಡ್19: ಮಧ್ಯಾಹ್ನದ ವರದಿ ಒಟ್ಟು ಪ್ರಕರಣಗಳು: 1079 ಮೃತಪಟ್ಟವರು: 36 ಗುಣಮುಖರಾದವರು: 494 ಹೊಸ ಪ್ರಕರಣಗಳು: 23

ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಹರಡುವ ಪ್ರಮಾಣ ತೀವ್ರಗೊಂಡಿದ್ದು, ಶುಕ್ರವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆವರೆಗಿನ ಅವಧಿಯಲ್ಲಿ ಒಟ್ಟು 23 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆಗೊಳಿಸಿರುವ ಬುಲೆಟಿನ್ ‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ.

ಈ ಪೈಕಿ ಬೆಂಗಳೂರು ನಗರದಲ್ಲಿ 14 ಮಂದಿ, ಹಾಸನದ ಮೂವರು, ಮಂಡ್ಯ, ಉಡುಪಿ, ಧಾರವಾಡ, ದಾವಣಗೆರೆ, ಬಳ್ಳಾರಿ, ಭಾಗಲಕೋಟೆಯ ಓರ್ವರಲ್ಲಿ ಕೊರೋನ ಸೋಂಕು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.

Please follow and like us:
error
error: Content is protected !!