fbpx

ರಾಜ್ಯದಲ್ಲಿ ಇಂದು 416 ಮಂದಿಗೆ ಕೊರೋನ ಪಾಸಿಟಿವ್: ಮೃತರ ಸಂಖ್ಯೆ 132ಕ್ಕೆ ಏರಿಕೆ

ಕೊಪ್ಪಳದಲ್ಲಿ ಕೊವಿಡ್ ನಿಂದ ಸೋಂಕಿತ ವ್ಯಕ್ತಿ ಗುಣಮುಖನಾಗಿದ್ದಕ್ಕೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪಿ-5838 ಇವರು ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಯಶಸ್ವಿ ಚಿಕಿತ್ಸೆಯ ನಂತರ  ಅವರನ್ನು ಇಂದು ಬಿಡುಗಡೆ ಮಾಡಲಾಗಿದೆ.

ಬೆಂಗಳೂರು  ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 416 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 8,697ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮೂರು, ಬೀದರ್ ನಲ್ಲಿ ಎರಡು, ದಾವಣಗೆರೆ, ಚಿಕ್ಕಮಗಳೂರು ಮತ್ತು ಉಡುಪಿಯಲ್ಲಿ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 132ಕ್ಕೆ ಏರಿದೆ  ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಶುಕ್ರವಾರ ಸಂಜೆ 5 ಗಂಟೆಯಿಂದ ಶನಿವಾರ ಸಂಜೆ 5 ಗಂಟೆವರೆಗೆ 9 ಸಾವು, 416 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದ್ದು, ಇಂದು ಒಂದೇ ದಿನ ಮೂರು ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯ 46 ವರ್ಷದ ಪುರುಷ, 56 ವರ್ಷದ ಪುರುಷ, 39 ವರ್ಷದ ಪುರುಷರೊಬ್ಬರು ಮೃತಪಟ್ಟಿದ್ದಾರೆ. ಬೀದರ್ ಜಿಲ್ಲೆಯಲ್ಲಿ 65 ವರ್ಷದ ಪುರುಷ ಮತ್ತು 51 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯಲ್ಲಿ 54 ವರ್ಷದ ಪುರುಷ, ದಾವಣಗೆರೆಯಲ್ಲಿ 90 ವರ್ಷದ ವೃದ್ಧ, ಚಿಕ್ಕಮಗಳೂರಿನಲ್ಲಿ 72 ವರ್ಷದ ಮಹಿಳೆಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 94, ಬೀದರ್ 73, ಬಳ್ಳಾರಿ 38, ರಾಮನಗರ 38, ಕಲಬುರಗಿ 34, ಮೈಸೂರು 22, ಹಾಸನ 16, ರಾಯಚೂರು 15, ಉಡುಪಿ 13, ಹಾವೇರಿ 12, ವಿಜಯಪುರ 9, ಚಿಕ್ಕಮಗಳೂರು 8, ಚಿಕ್ಕಬಳ್ಳಾಪುರ ಮತ್ತು ಧಾರವಾಡ ತಲಾ 5, ದಕ್ಷಿಣ ಕನ್ನಡ, ಮಂಡ್ಯ, ಉತ್ತರ ಕನ್ನಡ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ದಾವಣಗೆರೆ 3, ಬಾಗಲಕೋಟೆ, ತುಮಕೂರು, ಗದಗ ಮತ್ತು ಶಿವಮೊಗ್ಗದಲ್ಲಿ ತಲಾ 2, ಬೆಳಗಾವಿ ಮತ್ತು ಚಾಮರಾಜನಗರದಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 8,697 ಕೊರೋನ ಸೋಂಕಿತರ ಪೈಕಿ 5,391 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 181 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 132 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3170 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

Please follow and like us:
error
error: Content is protected !!