ರಾಜ್ಯದಲ್ಲಿ ಇಂದು 99 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1,246ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಹರಡುವ ಪ್ರಮಾಣ ತೀವ್ರಗೊಂಡಿದ್ದು, ರವಿವಾರ ಸಂಜೆ 5ರಿಂದ ಇಂದು ಸಂಜೆ ಅವಧಿಯಲ್ಲಿ ಒಟ್ಟು 99 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ.

ಈ ಪೈಕಿ ಹಾಸನ 4 , ರಾಯಚೂರು 6, ಬೆಂಗಳೂರು ನಗರ 24, ಮಂಡ್ಯ 17, ಕೊಪ್ಪಳ 3, ವಿಜಯಪುರ 5, ಗದಗ 5, ಯಾದಗಿರಿ 5, ಕಲಬುರಗಿ 10, ಉತ್ತರ ಕನ್ನಡ 9, ದಕ್ಷಿಣ ಕನ್ನಡ 2, ಬೆಳಗಾವಿ 2 ಹಾಗು ಉಡುಪಿ, ಬಳ್ಳಾರಿ, ದಾವಣಗೆರೆಯಲ್ಲಿ ಕೊರೋನ ಸೋಂಕು ದೃಢವಾಗಿದೆ.

ರಾಜ್ಯದಲ್ಲಿ ಇದುವರೆಗೆ 530 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 37 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.

Please follow and like us:
error