ಬೆಂಗಳೂರು : ಹೊಸ ರೂಪಾಂತರಿ ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಸರಕಾರ ರಾಜ್ಯಾದ್ಯಂತ ಜನೇವರಿ 2 ರವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ರಾತ್ರಿಯಿಂದ ಬೆಳಿಗ್ಗೆ ಯವರೆಗೆ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗುತ್ತದೆ. 9 ದಿನಗಳ ಕಾಲ ರಾಜ್ಯಾದ್ಯಂತ ಜಾರಿ ಮಾಡಲಾಗಿದ್ದು ಯಾವುದೇ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ, ತುರ್ತು ಸೇವೆಗಳಿಗೆ ಯಾವುದೇ ರೀತಿಯ ಅಡ್ಡಿಯಿಲ್ಲ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಹೇಳಿದ್ಧಾರೆ
Please follow and like us: