ರಾಜ್ಯದಲ್ಲಿ ಮತ್ತಿಬ್ಬರಲ್ಲಿ ಕೊರೋನ ಸೋಂಕು ದೃಢ

ಸೋಂಕಿತರ ಸಂಖ್ಯೆ ಹತ್ತಕ್ಕೇರಿಕೆ

ಬೆಂಗಳೂರು,: ಕರ್ನಾಟಕದಲ್ಲಿ ಕೊರೋನ ವೈರಸ್ ಸೋಂಕು ತೀವ್ರವಾಗಿ ಹಬ್ಬುತ್ತಿದ್ದು, ಮತ್ತಿಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 10ಕ್ಕೇರಿದೆ.

ಯುನೈಟೆಡ್ ಕಿಂಗ್ಡಂನಿಂದ ಆಗಮಿಸಿದ 20 ವರ್ಷದ ಯುವತಿಯೊಬ್ಬಳಲ್ಲಿ ಹಾಗೂ ಕಲಬುರಗಿಯ 60 ವರ್ಷದ ವೃದ್ಧರೋರ್ವರಲ್ಲಿ ಕೊರೋನ ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.

ಯುನೈಟೆಡ್ ಕಿಂಗ್ಡಂನಿಂದ ಆಗಮಿಸಿದ 20 ವರ್ಷದ ಯುವತಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಅದರ ವರದಿ ಬಂದಿದ್ದು, ಕೊರೋನ ಸೋಂಕು ದೃಢಪಟ್ಟಿದೆ. ಆಕೆಯನ್ನು ಬೆಂಗಳೂರಿನ ಆಸ್ಪತ್ರೆಯೊಂದರ ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೊಂದು ಪ್ರಕರಣದಲ್ಲಿ ಕೊರೋನ ರೋಗಲಕ್ಷಣಗಳು ಕಾಣಿಸಿಕೊಂಡಿದ್ದ ಕಲಬುರಗಿಯ 60 ವರ್ಷದ ವೃದ್ಧರೋರ್ವರ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರನ್ನು ಕಲಬುರಗಿಯ ಆಸ್ಪತ್ರೆಯೊಂದರ ಪ್ರತ್ಯೇಕ ವಾರ್ಡ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

Please follow and like us:
error