fbpx

ರಾಜ್ಯದಲ್ಲಿ ಮತ್ತೆ 127 ಮಂದಿಯಲ್ಲಿ ಕೊರೋನ ಸೋಂಕು ದೃಢ, ಮೂವರು ಬಲಿ

ಬೆಂಗಳೂರು, ಮೇ 19: ರಾಜ್ಯದಲ್ಲಿ ಮತ್ತೆ ಅತ್ಯಧಿಕ ಅಂದರೆ 127 ಮಂದಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದರಿಂದ ಸೋಂಕಿತರ ಒಟ್ಟು ಸಂಖ್ಯೆ 1373ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದೆರಡು ದಿನಗಳಲ್ಲಿ ಸೋಂಕಿಗೊಳಗಾದ ಮೂವರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬಲೆಟಿನ್ ತಿಳಿಸಿದೆ.

ಸೋಮವಾರ ಸಂಜೆ 5ರಿಂದ ಇಂದು ಮಧ್ಯಾಹ್ನ 12 ಗಂಟೆಯ ಅವಧಿಯಲ್ಲಿ 127 ಮಂದಿಯಲ್ಲಿ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಮಂಡ್ಯ ಜಿಲ್ಲೆಯೊಂದರಲ್ಲೇ ಇಂದು 61 ಮಂದಿಗೆ ಸೋಂಕು ತಗುಲಿದೆ. ದಾವಣಗೆರೆಯಲ್ಲಿ 19 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 12, ಕಲಬುರಗಿ ಜಿಲ್ಲೆಯಲ್ಲಿ ಇಂದು 11 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಂಗಳೂರು ಐದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ನಾಲ್ಕು, ಚಿಕ್ಕಮಗಳೂರು 2, ಹಾಸನದಲ್ಲಿ 3, ವಿಜಯಪುರ ಮತ್ತು ಯಾದಗಿರಿ, ಗದಗ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಒಂದೊಂದು ಸೋಂಕು ಪ್ರಕರಣಗಳು ದೃಢಪಟ್ಟಿದೆ. ಈ ಎಲ್ಲ ಪ್ರಕರಣಗಳು ಭಟ್ಕಳದಲ್ಲಿ ಕಾಣಿಸಿಕೊಂಡಿದೆ.

ರಾಜ್ಯದ ಒಟ್ಟು ಸೋಂಕಿತರ ಪೈಕಿ 530 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ 40 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.

Please follow and like us:
error
error: Content is protected !!