ರಾಜ್ಯದಲ್ಲಿ ಮತ್ತೊಂದು ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 21ಕ್ಕೇರಿಕೆ

ಧಾರವಾಡ, ಮಾ.22: ಧಾರವಾಡದ ವ್ಯಕ್ತಿಯೊಬ್ಬನಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ ಓರ್ವ ವ್ಯಕ್ತಿಯಲ್ಲಿ ಕೋರನ ಪಾಸಿಟಿವ್ ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ವಿದೇಶ ಪ್ರವಾಸದಿಂದ ಆಗಮಿಸಿದ್ದ ಈ ವ್ಯಕ್ತಿಯು ಮಾ.12ರಂದು ಧಾರವಾಡ ನಗರ ತಲುಪಿದ್ದ. ಶಂಕಿತ ಕೊರೋನ ರೋಗಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಈತ ಮಾ.18ರಂದು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದ. ಅಲ್ಲಿ ಈತನ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗದ ವಿಡಿಆರ್ ಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅದರ ವರದಿ ಇದೀಗ ಬಂದಿದ್ದು, ಆತನ ಸೋಂಕು ತಗುಲಿರುವುದು ದೃಢಗೊಂಡಿದೆ ಎಂದವರು ಮಾಹಿತಿ ನೀಡಿದ್ದಾರೆ.

Please follow and like us:
error