ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನಾ ವೈರಸ್ ದೃಢ

ಬೆಂಗಳೂರು: ಕಲಬುರಗಿಯಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಇರುವುದು ದೃಢವಾಗಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ 7ಕ್ಕೇರಿದೆ.

ಕಲಬುರಗಿಯ ನಾಲ್ಕು ಕೊರೋನಾ ಶಂಕಿತರಲ್ಲಿ ಮೂರು ವ್ಯಕ್ತಿಗಳ ವರದಿ ಈ ಮೊದಲೇ ಬಂದಿದ್ದು, ಇದೀಗ ನಾಲ್ಕನೆ ವ್ಯಕ್ತಿಯ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ನಿಗಾವಹಿಸಿರುವುದರಿಂದ, ಸೋಂಕಿತರು ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸವಿದೆ. ನಾಗರಿಕರು ಆತಂಕ ಪಡಬೇಕಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

Please follow and like us:
error