ರಾಜ್ಯದಲ್ಲಿ ಮತ್ತೊಮ್ಮೆ  ಲಾಕ್ ಡೌನ್ ?

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳ ಹಿನ್ನೆಲೆಯಲ್ಲಿ ಸರಕಾರ ಮತ್ತೊಮ್ಮೆ ಸಂಪೂರ್ಣ ಲಾಕ್ ಡೌನ್ ಗೆ ಮುಂದಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇದರ ಬಗ್ಗೆ ತಜ್ಞರ ಸಮಿತಿಯಿಂದ ಸಲಹೆಗಳನ್ನು ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶೀಘ್ರದಲ್ಲಿಯೇ ತೀರ್ಮಾನಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ನಿಯಂತ್ರಣ ಮೀರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹೀಗಾಗಿ ಬೆಂಗಳೂರಿನ ಎಲ್ಲ ಶಾಸಕರ ಜೊತೆ ಸಿಎಂ ಸಭೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಲಾಕ್ ಡೌನ್ ಸ್ಪರೂಪ ಯಾವ ರೀತಿ ಇರಲಿದೆ. ಪರೀಕ್ಷೆಗಳು ನಡೆಯುತ್ತಿರುವುದರಿಂದ ಪರೀಕ್ಷೆಗಳು ಸಂಪೂರ್ಣವಾದ ನಂತರ ಲಾಕ್ ಡೌನ್ ಬಗ್ಗೆ ನಿರ್ಣಯ ಕೈಗೊಳ್ಳಬಹುದು ಎನ್ನಲಾಗುತ್ತಿದೆ.ಈ ಲಾಕ್ ಡೌನ್ ಕೇವಲ ಬೆಂಗಳೂರಿಗೆ ಸೀಮಿತವಾಗುತ್ತಾ ಎನ್ನುವ ಗೊಂದಲದಲ್ಲಿ ಸಾರ್ವಜನಿಕರಿದ್ದಾರೆ.

ನಾಳೆ ಸರ್ವ ಪಕ್ಷಗಳ ಸಭೆಯೂ ನಡೆಯಲಿದೆ. ಹೀಗಾಗಿ ಕೇವಲ ಕೆಲವೇ ಏರಿಯಾಗಳನ್ನು ಲಾಕ್ ಡೌನ್ ಮಾಡಬೇಕಾ ಇಲ್ಲವೇ ಸಂಪೂರ್ಣ ಲಾಕ್ ಡೌನ್ ಮಾಡಬೇಕಾ ಎನ್ನುವ ತೀರ್ಮಾನ ಶೀಘ್ರದಲ್ಲಿಯ ಕೈಗೊಳ್ಳುವ ನಿರೀಕ್ಷೆಯಿದೆ.

 

Please follow and like us:
error