ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಓಪನ್: ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ

ಕೇಂದ್ರದಿಂದ ಗ್ರೀನ್ ಸಿಗ್ನಲ್ ಬರುವವರೆಗೂ ರೆಗ್ಯುಲರ್ ತರಗತಿಗಳು ಪ್ರಾರಂಭವಾಗುವುದಿಲ್ಲ. ತರಗತಿಗಳಿಗೆ ಬರಲು ವಿದ್ಯಾರ್ಥಿಗಳು ಉತ್ಸುಕರಾಗಿದ್ದಾರೆ. ಆದರೆ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು ತೆರೆಯಲಿದ್ದು, ಆದರೆ ತರಗತಿಗಳು ಆರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ದಿನನಿತ್ಯ‌ ತರಗತಿಗಳನ್ನು ಪ್ರಾರಂಭಿಸಲು ಕೇಂದ್ರದ ಅನುಮೋದನೆಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ.

“ಸೆಪ್ಟೆಂಬರ್ 21 ರಿಂದ ಶಿಕ್ಷಕರು ಮತ್ತು ಪಿಯುಸಿ ಉಪನ್ಯಾಸಕರು ಶಾಲೆ, ಕಾಲೇಜುಗಳಲ್ಲಿ ಹಾಜರಿರುತ್ತಾರೆ. 9, 10 ನೇ ತರಗತಿ ವಿದ್ಯಾರ್ಥಿಗಳು, ಪಿಯುಸಿ ವಿದ್ಯಾರ್ಥಿಗಳು ಅವರ ಅಧ್ಯಯನಕ್ಕೆ ಸಂಬಂಧಿಸಿದ ಅನುಮಾನಗಳು ಇದ್ದರೆ ಶಾಲೆಗೆ ಹೋಗಿ ನಿವಾರಿಸಿಕೊಳ್ಳಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೈಸೂರಿನಲ್ಲಿ ಹೇಳಿದ್ದಾರೆ

ಪ್ರತಿವರ್ಷ ಜೂನ್ ವೇಳೆಗೆ 10 ಲಕ್ಷ ವಿದ್ಯಾರ್ಥಿಗಳು ದಾಖಲಾಗುತ್ತಿದ್ದರು. ಅದು ಈ ವರ್ಷ ಆಗಲಿಲ್ಲ. ಆದ್ದರಿಂದ, ಸೆಪ್ಟೆಂಬರ್ ಅಂತ್ಯದ ವೇಳೆಗೆ ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.

ಈ ಬಾರಿ ಖಾಸಗಿ ಶಾಲೆಗಳು ಕೇವಲ ಒಂದು ಟರ್ಮ್ ಫೀಸ್ ಮಾತ್ರ ಪಡೆಯಬೇಕು ಎಂಬ ಆದೇಶವನ್ನು ಸರ್ಕಾರ ಜಾರಿಗೆ ತಂದಿದೆ. ಆಗೊಮ್ಮೆ ಖಾಸಗಿ ಶಾಲೆಗಳಿಂದ ಪೋಷಕರಿಗೆ ಸಮಸ್ಯೆ ಆದರೆ ಡಿಡಿಪಿಐ, ಬಿಇಓ ಈ‌ ಬಗ್ಗೆ ಕ್ರಮ‌ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಜೊತೆಗೆ 2020-21ರ ಶೈಕ್ಷಣಿಕ ವರ್ಷಕ್ಕೆ ಶಾಲೆಗಳು ಶುಲ್ಕವನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

Please follow and like us:
error